ಈಜಲು ಹೋದ ಬಾಲಕ ಮೊಸಳೆ ಪಾಲು..

ಲಿಂಗಸೂಗೂರು(ರಾಯಚೂರು):ಶಾಲೆ ರಜೆ ಹಿನ್ನೆಲೆಯಲ್ಲಿ ಬೇಸಿಗೆಯ ಬಿಸಿಯಿಂದ ತಪ್ಪಿಸಿಕೊಳ್ಳಲು ನಾರಾಯಣಪುರ ಜಲಾಶಯದ ಹಿನ್ನೀರಿಗೆ ಈಜಲು ಹೋಗಿದ್ದ ೧೫ ವರ್ಷದ ಬಾಲಕನನ್ನು ಮೊಸಳೆಯೊಂದು ಎಳೆದೊಯ್ದ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದ ೧೫ ವರ್ಷದ ಮಂಜುನಾಥ ಎಂಬ ಬಾಲಕ ನಾರಾಯಣ ಪುರ ಜಲಾಶಯದ ಹಿನ್ನೀರಿನಲ್ಲಿ ಈಜಲು ತೆರಳಿದ್ದ.ಈ ಸಂದರ್ಭದಲ್ಲಿ ಮೊಸಳೆಯೊಂದು ದಾಳಿ ಮಾಡಿ ಬಾಲಕನನ್ನು ಎಳೆದೊಯ್ದಿದೆ.
ಇನ್ನು ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನಾರಾಯಣಪುರ ಜಲಾಶಯದ ಹಿನ್ನೀರಿನಲ್ಲಿ ಈ ಘಟನೆ ಜರುಗಿದೆ.ಸದ್ಯ ಬಾಲಕನಿಗಾಗಿ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ.ಜೊತೆಗೆ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಚರಣೆ ಮುಂದುವರೆದಿದೆ.

ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು(ರಾಯಚೂರು)

Please follow and like us:

Related posts

Leave a Comment