ಲಾಕ್ ಡೌನ್ ಉಲ್ಲಂಘಿಸಿದ 118 ಮಂದಿ ವಿರುದ್ಧ ರೌಡಿ ಶೀಟ್ ಓಪನ್

ಕಲಬುರಗಿ: ಮಹಾಮಾರಿ ಕೊರೋನಾ ಸಾಂಕ್ರಾಮಿಕ ಸೋಂಕು ಹರಡದಂತೆ ಮುಂಜಾಗ್ರತವಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಸದ್ಯ ಆರಂಭದಿAದ ಇಲ್ಲಿಯವರೆಗೆ ಲಾಕ್ ಡೌನ್ ಉಲ್ಲಂಘಿಸಿದ ಜಿಲ್ಲೆಯ ೧೧೮ ಜನರ ವಿರುದ್ಧ ರೌಡಿ ಶೀಟ್ ತೆರೆಯಲಾಗಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯ ಆಳಂದ, ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಶಹಾಬಾದ, ಸೇಡಂ, ಮತ್ತು ಚಿಂಚೋಳಿ ತಾಲ್ಲೂಕಾಗಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿದವರ ವಿರುದ್ದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಲ್ಲಿಯವರೆಗೆ ಒಟ್ಟು ೩೮ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.ಈ ಪ್ರಕರಣಗಳಿಗೆ ಸಂಬAಧಿಸಿದAತೆ ೧೨೨ ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇನ್ನೂ ರಸ್ತೆಯಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದ ೬೫೯ ವಾಹನಗಳನ್ನು ವಶಕ್ಕೆ ಪಡೆದು ೯೨೭೦೦ ರೂ.ದಂಡ ಸಹ ವಿಧಿಸಲಾಗಿದೆ ಎಂದು ಎಸ್.ಪಿ.ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಇಂದು ತಿಳಿಸಿದ್ದಾರೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Please follow and like us:

Related posts

Leave a Comment