ಕೊರೊನಾದಿಂದ ಮೃತಪಟ್ಟ ವ್ಯಕ್ತಿ ಮನೆ ಬಳಿಯ ಪ್ರದೇಶ ಸೀಲ್‌ಡೌನ್..

ಶಿರಾ(ತುಮಕೂರು): ಕಳೆದ ಮಾರ್ಚ್ ೨೭ ರಂದು ಶಿರಾ ನಗರದ ಬೇಗಂ ಮೊಹಲ್ಲಾದಲ್ಲಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿ ವಾಸವಾಗಿದ್ದ ಮನೆಯ ಸುತ್ತಮುತ್ತಲಿನ ೧೦೦ ಮೀಟರ್ ವ್ಯಾಪ್ತಿಯಲ್ಲಿ ನಿನ್ನೆಯಿಂದ ಸೀಲ್‌ಡೌನ್ ಮಾಡಲಾಗಿದೆ.
ಅಂದ ಹಾಗೇ ಸರ್ಕಾರದ ಆದೇಶದಂತೆ ಶಿರಾ ತಹಶೀಲ್ದಾರ್ ಮೃತಪಟ್ಟ ವ್ಯಕ್ತಿ ವಾಸವಾಗಿದ್ದ ಮನೆಯ ಸುತ್ತಮುತ್ತಲಿನ ೧೦೦ ಮೀಟರ್ ವ್ಯಾಪ್ತಿಯಲ್ಲಿ ಮಾತ್ರ ಸೀಲ್‌ಡೌನ್ ಮಾಡಿದ್ದಾರೆ.
ಈ ಹಿಂದೆ ಆ ವ್ಯಕ್ತಿ ಕೊರೊನಾದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಆತ ವಾಸವಾಗಿದ್ದ ಮನೆಯ ಸುತ್ತಮುತ್ತಲಿನ ೩ ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ರೆಡ್ ಜೋನ್ ಹಾಗೂ ೭ ಕಿ.ಮೀ ವ್ಯಾಪ್ತಿಯನ್ನು ಬಫರ್ ಜೋನ್ ಎಂದು ಘೋಷಣೆ ಮಾಡಲಾಗಿತ್ತು.
ಜೊತೆಗೆ ರೆಡ್ ಜೋನ್ ಪ್ರದೇಶದಿಂದ ಯಾರೂ ಹೊರಗೆ ಹೋಗದಂತೆ ಮತ್ತು ಬೇರೆಯವರು ಒಳಗೆ ಬರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು.ಇದರ ಬೆನ್ನಲ್ಲೇ ಮೃತಪಟ್ಟ ವ್ಯಕ್ತಿ ವಾಸವಾಗಿದ್ದ ಮನೆಯ ಸುತ್ತಮುತ್ತಲಿನ ೧೦೦ ಮೀಟರ್ ವ್ಯಾಪ್ತಿಯಲ್ಲಿ ಮಾತ್ರ ಸರ್ಕಾರದ ಆದೇಶದಂತೆ ಸೀಲ್‌ಡೌನ್ ಮಾಡಲಾಗಿದೆ.
ಇನ್ನು ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಮಗನಿಗೂ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿತ್ತು. ನಂತರ ಬಾಲಕನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಕೊರೊನಾ ಸೋಂಕಿನಿAದ ಗುಣಮುಖನಾಗಿದ್ದಾನೆ
ಆತನ ಸಂಪರ್ಕದಲ್ಲಿದ್ದವರ ಫಲಿತಾಂಶ ಸಹ ನೆಗಟೀವ್ ಬಂದಿದ್ದು ಬಾಲಕನ ಜೊತೆಗೆ ಅವರನ್ನು ಸಹ ಮನೆಗಳಿಗೆ ಕಳುಹಿಸಲಾಗಿದೆ.
ಇದೇ ವೇಳೆ ಆಂಧ್ರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚುತ್ತಿರುವ ಬೆನ್ನಲ್ಲೇ ಕೆಲವರು ಅಕ್ರಮವಾಗಿ ತುಮಕೂರು ಜಿಲ್ಲೆಯ ಕರ್ನಾಟಕದ ಗಡಿತೊಳಗೆ ನುಸುಳುತ್ತಿದ್ದಾರೆನ್ನಲಾಗಿದೆ.ಹೀಗಾಗಿ ಆತಂಕಗೊAಡಿರುವ ಬರಗೂರು ಗ್ರಾಮಸ್ಥರು ತಾವೇ ಗ್ರಾಮವನ್ನು ಸೀಲ್‌ಡೌನ್ ಮಾಡಲು ತೀರ್ಮಾನಿಸಿದ್ದಾರೆ.

ಶ್ರೀಮಂತ ಕುಮಾರ್ ಎಕ್ಸ್ ಪ್ರೆಸ್ ಟಿವಿ ಶಿರಾ(ತುಮಕೂರು)

Please follow and like us:

Related posts

Leave a Comment