ಆರೋಗ್ಯ / HEALTH

ಪಾದರಾಯನಪುರ ಪುಂಡಾಟಿಕೆ,ಕೇವಲ ವಾರ್ನಿಂಗ್ ನೀಡುವುದಲ್ಲ

Published

on

ಬೆಂಗಳೂರು : ಪಾದರಾಯನಪುರದಲ್ಲಿ ನಡೆದಿರುವ ಘಟನೆಯನ್ನು ಕಾಂಗ್ರೆಸ್ ಪಕ್ಷವು ಖಂಡಿಸುತ್ತದೆ. ಆದರೆ, ಕೆಲವರು ಮಾಡಿದ ಕೃತ್ಯಕ್ಕೆ ಇಡೀ ಸಮಾಜವನ್ನೇ ದೂಷಿಸುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವ ನಗರದ ತಮ್ಮ ನಿವಾಸದಲ್ಲಿ ಮುಸ್ಲಿಂ ನಾಯಕರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು,ಸರ್ಕಾರ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳಿಗೆ ನಾವು ಸಹಕರಿಸುತ್ತೇವೆ. ತಮ್ಮ ಮಂತ್ರಿಗಳ, ಶಾಸಕರ ಹೇಳಿಕೆಗಳನ್ನೂ ಗಮನಿಸಿ. ಯಾವುದೇ ಪಕ್ಷದ ನಾಯಕರೂ ಪ್ರಚೋದನಕಾರಿ ಹೇಳಿಕೆ ನೀಡಿದರೆ, ಅವರ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಈ ಘಟನೆ ಖಂಡನೀಯ. ಕೃತ್ಯಕ್ಕೆ ಕಾರಣವಾದ ವ್ಯಕ್ತಿಗಳಿಗೆ ಶಿಕ್ಷೆಯಾಗಬೇಕು. ಇವರಿಗೆ ಕೇವಲ ವಾರ್ನಿಂಗ್ ನೀಡುವುದಲ್ಲ. ಕಠಿಣ ಶಿಕ್ಷೆ ನೀಡಬೇಕು ಎಂದು ಹೇಳಿದ್ದಾರೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version