ಕೊರೋನಾಗೆ ಮತ್ತೊಂದು ಸಾವು

ಕಲಬುರಗಿ : ಜಿಲ್ಲೆಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ 4ನೇ ಕೊರೋನಾ ಸಾವು ಸಂಭವಿಸಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಕಲ್ಪುರ್ಗಿಯಲ್ಲಿ ಸೋಮವಾರ ಬೆಳಗ್ಗೆ 80 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಕೊರೋನಾ ಸೋಂಕಿನ ಶಂಕೆ ಹಿನ್ನಲೆಯಲ್ಲಿ ಅವರ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು ಅವರಿಗೆ Covid 19 ಸೋಂಕು ತಗುಲಿರುವುದು ಖಚಿತವಾಗಿದೆ.
ಕಳೆದ 3 ವರ್ಷಗಳಿಂದ ಇವರು ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆ ಹೇಳಿದೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Please follow and like us:

Related posts

Leave a Comment