ನಿಮ್ಮ ಜಿಲ್ಲೆ

ಬೆಂಗಳೂರಿನಲ್ಲಿ ಹಲವು ವಾಹನಗಳ ಸೀಜ್

Published

on

ಬೆಂಗಳೂರು : ಕೊರೊನಾ ಹಾವಳಿಯಿಂದಾಗಿ ಇಡೀ ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದರೆ, ಕಳೆದ ಎರಡು ದಿನಗಳಿಂದ ನಗರದಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಲಾಕ್ಡೌೆನ್ ಬಿಗಿಗೊಳಿಸಿದ್ದು, ಪೊಲೀಸರೂ ಸಷ್ಟೇ ಕಾರ್ಯಪ್ರವೃತ್ತರಾಗಿದ್ದಾರೆ. ಅನಗತ್ಯವಾಗಿ ಸಂಚರಿಸುವ ವಾಹನಗಳನ್ನು ಸೀಜ್ ಮಾಡುತ್ತಿದ್ದಾರೆ.
ತುಮಕೂರು ಹೆದ್ದಾರಿಯ ಎಸ್‌ಆರ್‌ಎಸ್ ಬಸ್ ನಿಲ್ದಾಣದ ಬಳಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅನಗತ್ಯವಾಗಿ ಸಂಚರಿಸುವ ಬೈಕ್ ಹಾಗೂ ಕಾರುಗಳನ್ನು ಸೀಜ್ ಮಾಡುತ್ತಿದ್ದಾರೆ. ಮಂಗಳವಾರ ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಆನಂದರಾವ್ ಸರ್ಕಲ್ ಸೇರಿದಂತೆ ನಗರದ ವಿವಿಧೆಡೆ ಟ್ರಾಫಿಕ್ ಜಾಮ್ ಆಗಿತ್ತು. ಆ ಪ್ರಮಾಣದಲ್ಲಿ ವಾಹನಗಳು ರಸ್ತೆಗೆ ಇಳಿದಿದ್ದವು. ಈ ಹಿನ್ನೆಲೆ ಪೊಲೀಸರು ಲಾಕ್ಡೌನನ್ ಬಿಗಿಗೊಳಿಸಿದ್ದಾರೆ. ಪ್ರತಿ ವಾಹನವನ್ನೂ ಪರಿಶೀಲನೆ ನಡೆಸುತ್ತಿದ್ದಾರೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version