ಆರೋಗ್ಯ / HEALTH

ಇಂಡಿಯ ಗ್ರಾಮೀಣ ಭಾಗದಲ್ಲಿ ಕೊರೊನಾ ಬಗ್ಗೆ ಜಾಗೃತಿ..

Published

on

ಇಂಡಿ (ವಿಜಯಪುರ): ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದಲ್ಲಿ ಕೊರೊನಾ ಜಾಗೃತಿ ತಂಡ ಮನೆ ಮನೆ ತೆರಳಿ ಸಾರ್ವಜನಿಕರಲ್ಲಿ ಕೋವಿಡ್-೧೯ ಬಗ್ಗೆ ಅರಿವು ಮೂಡಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಸಿದರಾಯ ಭಾವಿಕಟ್ಟಿ ಕೊರೊನಾ ವೈರಸ್ ಸೋಂಕು ಕುರಿತಂತೆ ಮಾತನಾಡಿ,ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ.ವದಂತಿ,ಊಹಾಪೋಹಗಳನ್ನು ನಂಬಬಾರದು.ಸೋAಕು ಹರಡದಂತೆ ತಡೆಗಟ್ಟಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿದ್ರಾಮ ಸಿನಖೇಡ ಮಾತನಾಡಿ, ಕೊರೊನಾ ವೈರಸ್ ಲಕ್ಷಣಗಳಾದ ತೀವ್ರ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಹಾಗೂ ಭೇದಿಯ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಯ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮುಂಜಾಗ್ರತಾ ದೃಷ್ಟಿಯಿಂದ ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರವನ್ನು ಅಡ್ಡ ಹಿಡಿಯಬೇಕು. ಸಾರ್ವಜನಿಕ ಸ್ಥಳದಲ್ಲಿ ಉಗಳಬಾರದು.ಕೈಗಳನ್ನು ಸಾಬೂನಿನಿಂದ ತೊಳ್ಳಯಬೇಕು.ಸ್ವಚ್ಛತೆ ಕಾಪಾಡಬೇಕು.ರೋಗದ ಲಕ್ಷಣ ಹೊಂದಿರುವವರು ಜನರೊಂದಿಗೆ ನಿಕಟ ಸಂಪರ್ಕ ಹೊಂದಬಾರದು.ಸರಿಯಾಗಿ ಬೇಯಿಸದ ಹಸಿ ಮೊಟ್ಟೆ, ಮಾಂಸ, ಸೇವೆನೆ ಮಾಡಬಾರದು. ಕೊರಾನಾ ವೈರಸ್ ಬಗ್ಗೆ ಭಯಬೇಡ, ಎಚ್ಚರವಿರಲಿ ಎಂಬ ಸ್ಲೊಗನ್‌ನೊಂದಿಗೆ ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಪುಂಡಲಿಕ ಕಪಾಲಿ,ಹುಸೇನಸಾಬ ಪ್ಯಾಟಿ ಹಾಗೂ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು,ಅಂಗನವಾಡಿ ಕಾರ್ಯಕರ್ತರು, ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಸಾಥ್ ನೀಡಿದರು.

ಶಂಕರ್ ಜಮಾದಾರ ಎಕ್ಸ್ ಪ್ರೆಸ್ ಟಿವಿ ಇಂಡಿ (ವಿಜಯಪುರ)

Click to comment

Trending

Exit mobile version