ಆಸ್ಪತ್ರೆಯ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ..!

ಕಲಬುರಗಿ :ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ ಕಾರಣಕ್ಕೆ ಆಕೆ ಆಸ್ಪತ್ರೆಯ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ನಗರದಲ್ಲಿ ನಡೆದಿದೆ.
ಜಿಲ್ಲೆಯ ಜೇವರ್ಗಿ ತಾಲೂಕಿನ ಚೆನ್ನಮ್ಮ ಅವರು ಪ್ರಸವ ವೇದನೆಯಿಂದ ಜಿಮ್ಸ್ ಆಸ್ಪತ್ರೆಗೆ ಆಗಮಿಸಿದ್ದರು. ಅಲ್ಲಿನ ಸಿಬ್ಬಂದಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದಾರೆ. ಅವರಿಗೆ ನೋವು ಹೆಚ್ಚಾಗಿ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಯ ಮುಂಭಾಗವೇ ಹೆರಿಗೆಯಾಗಿದೆ. ಮಗುವಿಗೆ ಜನ್ಮ ನೀಡಿದ ಗಂಟೆಗಳ ಬಳಿಕ ಕೂಡ ಸಿಬ್ಬಂದಿ ದಾಖಲು ಮಾಡಿಕೊಳ್ಳಲು ಮುಂದಾಗಲಿಲ್ಲ.
ಇದನ್ನು ಕಂಡ ಸಾರ್ವಜನಿಕರು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆ ನಂತರ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಯಿತು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Please follow and like us:

Related posts

Leave a Comment