ಪೊಲೀಸ್ ಪೇದೆ ಮೇಲೆ ಜೂಜುಕೋರರಿಂದ ಹಲ್ಲೆ

ಶಿರಾ(ತುಮಕೂರು): ಶಿರಾ ತಾಲೂಕಿನ ಬುಕ್ಕಾ ಪಟ್ಟಣ ಹೋಬಳಿಯ ಜಾನಕಲ್ ಗ್ರಾಮದ ಕೆರೆ ಅಂಗಳದಲ್ಲಿ ಜೂಜು ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಜೂಜುಕೋರರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಜೂಜು ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಜೂಜುಕೋರರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ನಡೆದಿದೆ.
ಶಿರಾ ತಾಲೂಕಿನ ಜಾನಕಲ್ ಗ್ರಾಮದ ಕೆರೆ ಅಂಗಳದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಾಲ್ವರು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರನ್ನು ಕಂಡು ಜೂಜುಕೋರರು ಕಾಲ್ಕಿತ್ತಿದ್ದಾರೆ. ಹಿಂಬಾಲಿಸಿಕೊAಡು ಹೋದ ಪೊಲೀಸ್ ಪೇದೆ ಮಂಜುನಾಥ್‌ಗೆ, ಜೂಜುಕೋರರು ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಘಟನೆಯಿಂದ ಶಿರಾ ಪೊಲೀಸ್ ಠಾಣೆಯ ಪೇದೆ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದು,ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈ ಸಂಬAಧ ಒಟ್ಟು ಹನ್ನೇರಡಕ್ಕೂ ಹೆಚ್ಚು ಮಂದಿ ಜೂಜುಕೋರರ ಮೇಲೆ ಕಲಂ ನಂ ೧೪೩, ೧೪೮, ೩೨೩, ೩೨೪, ೩೩೨, ೩೦೭, ೩೫೩, ೧೪೯ರ ಅಡಿಯಲ್ಲಿ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ಶಿರಾ(ತುಮಕೂರು)

Please follow and like us:

Related posts

Leave a Comment