ಆರೋಗ್ಯ / HEALTH

ಗದಗದಲ್ಲಿ ಬಿಎಸ್‌ಎಫ್ ಯೋಧ ಸಾವು..

Published

on

ಗದಗ: ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ ಸಾವು ಕಂಡಿರುವ ಘಟನೆ ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದಲ್ಲಿ ನಡೆದಿದೆ.
ವೀರಪ್ಪ ತಹಶೀಲ್ದಾರ (೩೪) ಮೃತ ಯೋಧರಾಗಿದ್ದು,ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಅಂದ ಹಾಗೇ ವೀರಪ್ಪ ಬಿಎಸ್‌ಎಫ್ ಪಶ್ಚಿಮ ಬಂಗಾಳದ ೧೫೮ನೇ ಬಟಾಲಿಯನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ೨೦೦೬ರಿಂದ ದೇಶ ಸೇವೆಯಲ್ಲಿ ತೊಡಗಿದ್ದರು. ವೀರಪ್ಪ ರಜೆಗಾಗಿ ಶ್ಯಾಗೋಟಿ ಗ್ರಾಮಕ್ಕೆ ಬಂದಿದ್ದು, ಏಪ್ರಿಲ್ ೧೫ಕ್ಕೆ ರಜೆ ಮುಗಿದಿತ್ತು. ಆದರೆ ಲಾಕ್‌ಡೌನ್ ಆದ ಹಿನ್ನೆಲೆಯಲ್ಲಿ ವಾಪಸ್ ಹೋಗಲು ಸಾಧ್ಯವಾಗದೆ ಗ್ರಾಮದಲ್ಲೇ ಉಳಿದುಕೊಂಡಿದ್ದರು.ಈ ವೇಳೆ ಇವರು ನಿಮೋನಿಯಾ ಹಾಗೂ ಉಸಿರಾಟದ ತೊಂದರೆಯಿAದ ಬಳಲುತ್ತಿದ್ದರು. ಹೀಗಾಗಿ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಸೇರಿದ ಯೋಧ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಸಾವನ್ನಪ್ಪಿದ್ದರು.
ಬಳಿಕ ಕೊರೊನಾ ವೈರಸ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದಾದ ನಂತರ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಇಂದು ಅಂತ್ಯ ಸಂಸ್ಕಾರ ಮಾಡಲು ಜಿಲ್ಲಾಡಳಿತ ಅನುಮತಿ ನೀಡಿತ್ತು.
ಇದೇ ವೇಳೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಮಾತನಾಡಿ, ಗದಗ ಜಿಲ್ಲಾಡಳಿತದಿಂದ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ ಎಂದು ತಿಳಿಸಿದ್ದಾರೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಗದಗ

Click to comment

Trending

Exit mobile version