ಫೀಜ್‌ಗೆ ಒತ್ತಡ ಹಾಕಿದ್ರೆ ಸುಮ್ಮನಿರೋಲ್ಲ..ಖಾಸಗಿ ಶಾಲೆಗಳಿಗೆ ಸರ್ಕಾರ ಎಚ್ಚರಿಕೆ..

ಬೆಂಗಳೂರು :ಲಾಕ್‌ಡೌನ್ ಸಂದರ್ಭದಲ್ಲಿ ಶುಲ್ಕ ಕಟ್ಟಲು ಸಾಧ್ಯವಾಗದ ಪೋಷಕರ ಮೇಲೆ ಒತ್ತಡ ಹಾಕಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಯಾವ ಪೋಷಕರು, ತಮ್ಮ ಮಕ್ಕಳ ಶುಲ್ಕವನ್ನು ಕಟ್ಟಲು ಅಸಹಾಯಕರೋ, ಸದ್ಯಕ್ಕೆ ತಮಗೆ ಸಾಧ್ಯವಿಲ್ಲವೆಂದು ನಿರಾಕರಿಸುತ್ತಾರೋ ಅಂತಹವರಿAದ ಯಾವುದೇ ಕಾರಣಕ್ಕೂ ಶುಲ್ಕ ವಸೂಲು ಮಾಡುವ ಹಾಗಿಲ್ಲ.ಒಂದು ವೇಳೆ ಶುಲ್ಕ ಕಟ್ಟಲು ಸಾಧ್ಯವಾಗದ ಪೋಷಕರ ಮೇಲೆ ಒತ್ತಡ ಹೇರುವುದರ ಕುರಿತು ದೂರುಗಳು ಬಂದಲ್ಲಿ ಅಂತಹ ಶಾಲೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮಕ್ಕೆ ಮುಂದಾಗಲು ಸಚಿವರು ಆಯುಕ್ತರಿಗೆ ನಿರ್ದೇಶನವನ್ನು ನೀಡಿದ್ದಾರೆ.
ಪೋಷಕರು ನೀಡುವ ಹಣವನ್ನು ಈ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕ ಸಿಬ್ಬಂದಿ ವೇತನಕ್ಕೆ ಬಳಸಿಕೊಳ್ಳಲು ಪ್ರಥಮ ಆದ್ಯತೆಯನ್ನು ನೀಡಬೇಕು ಎಂಬ ಅಂಶವನ್ನು ಶಿಕ್ಷಣ ಇಲಾಖೆಯ ನಿರ್ದೇಶನದಲ್ಲಿ ಸ್ಪಷ್ಟಪಡಿಸಬೇಕೆಂಬ ಸೂಚನೆಯನ್ನು ಸಹ ಸಚಿವ ಸುರೇಶ್ ಕುಮಾರ್ ನೀಡಿದ್ದಾರೆ.
ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment