ಅಂಬ್ಯುಲೆನ್ಸ್ ಚಾಲಕ ಅಪಘಾತಕ್ಕೆ ಬಲಿ

ಹಾಸನ: ದ್ವಿಚಕ್ರ ವಾಹನಕ್ಕೆ ಗೂಡ್ಸ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ಹಾಸನದ ಹೊಸ ಬಸ್ ನಿಲ್ದಾಣದ ಸಮೀಪ ನಡೆದಿದೆ.
ಕೃಷ್ಣಮೂರ್ತಿ ಅಪಘಾತದಲ್ಲಿ ಸಾವಿಗೀಡಾದ ದ್ವಿಚಕ್ರ ವಾಹನ ಸವಾರ.ಕೋವಿಡ್-೧೯ ಹಿನ್ನೆಲೆಯಲ್ಲಿ ೧೦೮ ಅಂಬ್ಯುಲೆನ್ಸ್ನಲ್ಲಿ ಚಾಲಕನಾಗಿರೋ ಈತ ರಾತ್ರಿಪಾಳಯದ ಕರ್ತವ್ಯ ಮುಗಿಸಿ ಸ್ವಗ್ರಾಮ ರಾಜೇನಹಳ್ಳಿಗೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ
ಈ ವೇಳೆ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಂಬುಲೆನ್ಸ್ ಚಾಲಕ ಕೃಷ್ಣಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯ ಮತ್ತು ಅತಿವೇಗವೇ ಕಾರಣವಾಗಿದ್ದು,ಈ ಸಂಬAಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎ.ಎಸ್.ಸಂತೋಷ್ ಎಕ್ಸ್ ಪ್ರೆಸ್ ಟಿವಿ ಹಾಸನ

Please follow and like us:

Related posts

Leave a Comment