ಆನೇಕಲ್ ತಾಲೂಕಿನಲ್ಲಿ ಪಡಿತರ ಅಕ್ರಮ ನಡೆದಿಲ್ಲ..

ಆನೇಕಲ್(ಬೆಂಗಳೂರು): ಬಿಜೆಪಿ ಮುಖಂಡರು ಅಕ್ಕಿ ಮೂಟೆಗಳನ್ನು ಗೋದಾಮುಗಳಲ್ಲಿ ಅಕ್ರಮವಾಗಿ ಸಂಗ್ರಹಣೆ ಮಾಡಿರುವುದು ಶುದ್ಧ ಸುಳ್ಳು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿ, ಕೆಲವು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಒಟ್ಟು ೧೪,೨೬೦ ಕ್ವಿಂಟಾಲ್ ಆಹಾರ ಧಾನ್ಯಗಳನ್ನು ದೊಮ್ಮಸಂದ್ರದ ರೇಷ್ಮೆ ಬೆಳೆಗಾರರು ಮತ್ತು ರೈತರ ಸೇವಾ ಸಹಕಾರ ಸಂಘಕ್ಕೆ ಸೇರಿದ ಗೋದಾಮುಗಳಲ್ಲಿ ಸಂಗ್ರಹಣೆ ಮಾಡಲು ತೀರ್ಮಾನ ಮಾಡಲಾಗಿತ್ತು.ಅಲ್ಲದೆ, ಏಪ್ರಿಲ್ ೧೪ರಿಂದ ನಿರಂತರವಾಗಿ ಗೋದಾಮಿಗೆ ಸರಬರಾಜಾಗುತ್ತಿದ್ದ ಅಕ್ಕಿಯನ್ನು ಶೇಖರಣೆ ಮಾಡಿ ಗೋದಾಮಿಗೆ ಬಾಡಿಗೆ ನೀಡಲಾಗಿದೆ ಎಂದು ಹೇಳಿದರು.
ಕಳೆದ ೧೮ರಂದು ಡಿಸಿ ಅನುಮತಿ ಪಡೆದು ಆನೇಕಲ್ ತಾಲೂಕಿಗೆ ಪಡಿತರ ಧಾನ್ಯಗಳನ್ನು ಮರು ವಿತರಣೆ ಮಾಡಲು ತೀರ್ಮಾನಿಸಲಾಗಿತ್ತು.
ಜೊತೆಗೆ ಆನೇಕಲ್ ತಾಲೂಕು ವ್ಯಾಪ್ತಿಯಲ್ಲಿನ ಸರ್ಜಾಪುರ ಹೋಬಳಿಯಲ್ಲಿ ಎಸ್‌ಎಫ್‌ಎಸ್‌ಸಿಎಸ್ ಗೋದಾಮು ಭರ್ತಿಯಾದ ಹಿನ್ನೆಲೆಯಲ್ಲಿ ಖಾಸಗಿ ಗೋದಾಮುಗಳಲ್ಲಿ ಆಹಾರ ಧಾನ್ಯಗಳನ್ನು ಬಟವಾಡೆ ಮಾಡುವಂತೆ ಅಲ್ಲಿನ ತಹಶೀಲ್ದಾರ್ ಅವರೇ ಸೂಚನೆ ಕೊಟ್ಟಿದ್ದರು ಎಂದು ಹೇಳಿದರು.
ಇನ್ನು ಎಲ್ಲಿಯೂ ಕೂಡ ಆಹಾರ ಧಾನ್ಯಗಳು ಮಧ್ಯವರ್ತಿಗಳ ಪಾಲಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ಯಾವುದೇ ರೀತಿಯ ಲೋಪದೋಷ ಆಗಲು ಅಧಿಕಾರಿಗಳು ಅವಕಾಶ ನೀಡಿಲ್ಲ. ಎಲ್ಲ ಪ್ರಕ್ರಿಯೆಗಳೂ ನಿಯಮಬದ್ಧವಾಗಿ ನಡೆದಿವೆ. ಎಲ್ಲೂ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿ.ಕಾರ್ತಿಕ್ ಎಕ್ಸ್ ಪ್ರೆಸ್ ಟಿವಿ ಆನೇಕಲ್

Please follow and like us:

Related posts

Leave a Comment