ಕೊನೆಗೂ ಬೋನಿಗೆ ಬಿತ್ತು ಚಿರತೆ

ಮಾಗಡಿ(ರಾಮನಗರ):ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿದ್ದ ಸುಮಾರು ಮೂರೂವರೆ ವರ್ಷದ ಹೆಣ್ಣು ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ಮಾಗಡಿ ತಾಲೂಕಿನಲ್ಲಿ ನಡೆದಿದೆ.
ಅಂದ ಹಾಗೇ ಮಾಗಡಿ ತಾಲೂಕಿನ ತಾಂಡೇನಪುರ ಗ್ರಾಮದ ಜನರಿಗೆ ಈ ಚಿರತೆ ಭಯ ಹುಟ್ಟಿಸಿತ್ತು.ಅಲ್ಲದೆ, ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಜನರು,ರೈತರು ಹೊಲ, ಗದ್ದೆಗಳಿಗೂ ತೆರಳುವುದಕ್ಕೂ ಹೆದರುತ್ತಿದ್ದರು.
ಇದಾದ ಬಳಿಕ ಅರಣ್ಯ ಇಲಾಖೆಗೆ ಗ್ರಾಮಸ್ಥರು ಚಿರತೆ ಹಿಡಿಯುವಂತೆ ಹಲವು ಬಾರಿ ಮನವಿ ಮಾಡಿದ್ದರು.ನಂತರ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟ ಬೋನಿಗೆ ಚಿರತೆ ಬಿದ್ದಿದ್ದು, ಆತಂಕದಲ್ಲಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ರಾಮನಗರ

Please follow and like us:

Related posts

Leave a Comment