ಕೊಪ್ಪಳ ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕೊಪ್ಪಳ : ಭತ್ತದ ಬೆಳೆ ನಷ್ಟ ಹಾಗೂ ಸಾಲ ಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಚಳ್ಳೂರು ಗ್ರಾಮದಲ್ಲಿ ನಡೆದಿದೆ.
ಹೇಮಂತರಾಜ್ ದೇಸಾಯಿ (೪೦) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಬ್ಯಾಂಕ್ ಸೇರಿದಂತೆ ಇತರೆಡೆ ಈತ ಕೈ ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.
ಸದ್ಯ ಮಾಡಿದ ಸಾಲ ತೀರಿಸಲಾಗದೇ ಹಾಗೂ ಭತ್ತದ ಬೆಳೆ ನಷ್ಟವಾದ ಪರಿಣಾಮ ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾನೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಕಾರಟಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾಭೀರಾಜ್ ದಸ್ತೇನವರ್ ಎಕ್ಸ್ ಪ್ರೆಸ್ ಟಿವಿ ಕೊಪ್ಪಳ

Please follow and like us:

Related posts

Leave a Comment