ಮಾಲೀಕನಿಂದಲೇ ಬಾರ್‌ನಲ್ಲಿ ಮದ್ಯ ಕಳ್ಳತನ

ಆನೇಕಲ್(ಬೆಂ.ನಗರ): ಬಾರ್ ಮಾಲೀಕನೊಬ್ಬ ತನ್ನ ಬಾರ್‌ನಲ್ಲೇ ಮದ್ಯ ಕದ್ದು ದುಪ್ಪಟ್ಟು ಹಣಕ್ಕೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ವಿಷಯ ತಡವಾಗಿ ಬೆಳಕಿಗೆ ಬಂದಿದೆ.ಸದ್ಯ ಈ ಪ್ರಕರಣ ಸಂಬAಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅAದ ಹಾಗೇ ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ಲಕ್ಷ್ಮೀಶ್ ಬಾರ್ ಅಂಡ್ ರೆಸ್ಟೋರೆಂಟ್‌ನ ಮಾಲೀಕ ಶ್ರೀನಿವಾಸ್ ಹಾಗೂ ಸ್ನೇಹಿತ ಶಾಮುಲು ಬಾರ್ ನಲ್ಲಿ ಮದ್ಯವನ್ನು ಕಳ್ಳತನ ಮಾಡಿದ್ದರು. ಬಳಿಕ ಮುನಿರೆಡ್ಡಿ ಲೇಔಟ್‌ನಲ್ಲಿರುವ ತನ್ನ ಮನೆಗೆ ಮದ್ಯ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಿದ್ದರು.ಇಂದು ಸಹ ಬೆಳಗಿನ ಜಾವ ನಾಲ್ಕು ಗಂಟೆಯ ಸುಮಾರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಶ್ರೀನಿವಾಸ್ ಮತ್ತು ಆತನ ಸ್ನೇಹಿತ ಶಾಮುಲುರನ್ನು ಪೋಲಿಸರು ಬಂಧಿಸಿದ್ದಾರೆ.
ಇನ್ನು ಕೊರೋನಾ ಲಾಕ್ ಡೌನ್ ಹಿನ್ನೆಲೆ ಮದ್ಯದ ಸ್ಟಾಕ್ ಹಾಗೆಯೇ ಇದ್ದು,ದುಪ್ಪಟ್ಟು ಹಣದ ಆಸೆಗೆ ಬಿದ್ದ ಬಾರ್‌ನ ಮಾಲೀಕ ತನ್ನ ಬಾರ್‌ನಲ್ಲಿಯೇ ಕಳ್ಳತನಕ್ಕೆ ಮುಂದಾಗಿದ್ದು,ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಹೆಬ್ಬಗೋಡಿ ಪೋಲಿಸರು ವಿಚಾರಣೆ ನಡೆಸುತ್ತಿದ್ದಾರೆ.

ಸಿ.ಕಾರ್ತಿಕ್ ಎಕ್ಸ್ ಪ್ರೆಸ್ ಟಿವಿ ಆನೇಕಲ್(ಬೆಂ.ನಗರ)

Please follow and like us:

Related posts

Leave a Comment