ದಲಿತರ ಮೇಲೆ ಹಲ್ಲೆ ನಡೆಸಿದವರ ಬಂಧಿಸಿ

ಸಿಂಧನೂರು(ರಾಯಚೂರು):ದುಮುತಿ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಹಕ್ಕುಗಳ ಸಮಿತಿ ಕರ್ನಾಟಕದ ಸಿಂಧನೂರಿನ ತಾಲೂಕು ಸಮಿತಿ ಆಗ್ರಹಿಸಿದೆ.
ಈ ಸಂಬ0ಧ ಮಾತನಾಡಿರುವ ತಾಲೂಕು ಸಮಿತಿ ಕಾರ್ಯದರ್ಶಿ ನರಸಿಂಹಪ್ಪ, ದುಮುತಿ ಗ್ರಾಮದಲ್ಲಿ ಕ್ರಿಕೆಟ್ ಆಟಕ್ಕೆ ಸಂಬAಧಿಸಿದAತೆ ನಡೆದ ಜಗಳವನ್ನು ಕಾರಣವಾಗಿಟ್ಟುಕೊಂಡು ಸವರ್ಣಿಯರು ಮಾದಿಗ ಸಮುದಾಯದವರ ಮೇಲೆ ಏಕಾಏಕಿ ದಾಳಿ ಮಾಡಿದ್ದಾರೆ.
ಈ ವೇಳೆ ಅಶೋಕ, ಬಾಲಸ್ವಾಮಿ, ಶ್ರೀಕಾಂತ್, ದಾನಪ್ಪ ಹಾಗೂ ಹುಸೇನಮ್ಮ ಅನ್ನಮ್ಮ ಎಂಬ ಮಹಿಳೆಯರ ಮೇಲೆಯೂ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಕೂಡಲೇ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.ಜೊತೆಗೆ ಇಂತಹ ಘಟನೆಗಳು ರಾಯಚೂರು ಜಿಲ್ಲೆಯಲ್ಲಿ ಮರು ಕಳಿಸದಂತೆ ಜಿಲ್ಲಾಡಳಿತ ಮುಂದಾಗಬೇಕು.ಹಲ್ಲೆಗೊಳಗಾದವರಿಗೆ ಪರಿಹಾರ ಮತ್ತು ಚಿಕಿತ್ಸೆ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸೈಯದ್ ಬಂದೇ ನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು(ರಾಯಚೂರು)

Please follow and like us:

Related posts

Leave a Comment