ಆರೋಗ್ಯ / HEALTH

ಹುಬ್ಬಳ್ಳಿಯಲ್ಲಿ ಮತ್ತೊಂದು ಕೊರೊನಾ ಕೇಸ್

Published

on

ಹುಬ್ಬಳ್ಳಿ(ಧಾರವಾಡ):ಜಿಲ್ಲೆಯ ಹುಬ್ಬಳ್ಳಿಯಲ್ಲಿ ಇಂದು ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಕೆಮ್ಮು,ನೆಗಡಿ ಹಾಗೂ ಜ್ವರದಿಂದ ಬಳಲುತ್ತಿದ್ದ ಹುಬ್ಬಳ್ಳಿ ಶಾಂತಿನಗರದ ೫೭ ವರ್ಷದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಇದು ಜಿಲ್ಲೆಯ ೧೦ ನೇ ಪ್ರಕರಣವಾಗಿದೆ. ಈಗಾಗಲೇ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು,ಇನ್ನೂ ೮ ಮಂದಿ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ(ಧಾರವಾಡ)

Click to comment

Trending

Exit mobile version