ನಿತ್ಯೋತ್ಸವ ಕವಿಯ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ

ಬೆಂಗಳೂರು:ನಿತ್ಯೋತ್ಸವ ಕವಿ ಕೆ ಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ.
ಬಹಳ ದಿನಗಳಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.
ಇನ್ನು ಕವಿ ಕೆ.ಎಸ್. ನಿಸಾರ್ ಅಹಮದ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುವುದಕ್ಕೆ ಸಾರ್ವಜನಿಕರಿಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ಮನೆಯ ಮುಂಭಾಗ ಪಾರ್ಥೀವ ಶರೀರ ಇಡಲು ಸರ್ಕಾರ ಅವಕಾಶ ನೀಡಿದೆ. ಹಾಗಾಗಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಬಂದು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಬಹುದು ಎಂದು ತಿಳಿಸಿದರು.
ನಾಳೆ ಬೆಳಗ್ಗೆ ೧೧ ಗಂಟೆಗೆ ಮುನಿರೆಡ್ಡಿ ಪಾಳ್ಯದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಅವರ ಆಸೆಯಂತೆಯೇ ಅವರ ಮಡದಿಯ ಗೋರಿ ಪಕ್ಕದಲ್ಲೇ ಅಂತ್ಯ ಸಂಸ್ಕಾರ ನಡೆಸುವುದಾಗಿ ಹೇಳಿದರು.
ಮಗಳು ಅಮೇರಿಕಾದಲ್ಲಿ ಇದ್ದಾರೆ. ಈಗ ಅವರು ಬರುವುದಕ್ಕೆ ಆಗುತ್ತಿಲ್ಲ. ಅವಳು ತಂದೆಯ ಪಾರ್ಥೀವ ಶರೀರ ನೋಡಬೇಕು ಎಂದು ತುಂಬಾ ಹಠ ಮಾಡುತ್ತಿದ್ದು, ಏನ್ ಮಾಡಬೇಕೆಂದು ತೋಚುತ್ತಿಲ್ಲ ಎಂದು ಸೊಸೆ ರುಮೀನಾ ಹೇಳಿದರು.

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment