ತುಮಕೂರು ನಗರದಲ್ಲಿ ಲಾಕ್ ಡೌನ್ ಸಡಿಲಿಕೆ..

ತುಮಕೂರು:ಕೊರೊನಾ ಹಿನ್ನಲೆಯಲ್ಲಿ ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ತುಮಕೂರು ನಗರದಲ್ಲಿ ನಾಳೆಯಿಂದ ವೈನ್ ಶಾಪ್ ಸೇರಿದಂತೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ತುಮಕೂರು ನಗರದಲ್ಲಿ ಲಾಕ್ ಡೌನ್ ಸಡಿಲಿಸುವ ಸಂಬAಧ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಹಾಗೂ ವರ್ತಕರ ಸಂಘಗಳ ಪ್ರತಿನಿಧಿಗಳ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ,ಕೊರೊನಾ ಹಿನ್ನಲೆಯಲ್ಲಿ ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ತುಮಕೂರು ನಗರದಲ್ಲಿ ನಾಳೆಯಿಂದ ವೈನ್ ಶಾಪ್ ಸೇರಿದಂತೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ.
ಅಲ್ಲದೆ, ವರ್ತಕರು ಬೆಳಿಗ್ಗೆ ೧೦ ಗಂಟೆಯಿAದ ರಾತ್ರಿ ೭ ಗಂಟೆಯವರೆಗೆ ಅಂಗಡಿ ತೆರೆದು ವಹಿವಾಟು ನಡೆಸಲು ಅವಕಾಶ, ಅಂಗಡಿಯ ಹೊರಗೆ ಹಾಗೂ ಒಳಗೆ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸಬೇಕು, ಅಂಗಡಿಯಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು.ಅಂಗಡಿ ಮಾಲೀಕರು ಸಿಸಿಟಿವಿ ಅಳವಡಿಸಬೇಕು ಎಂದು ತಿಳಿಸಿದರು.
ಇನ್ನು ಸರ್ಕಾರದ ಆದೇಶ ಮತ್ತು ಜಿಲ್ಲಾಡಳಿತ ನೀಡುವ ಸೂಚನೆಗಳನ್ನು ವರ್ತಕರು ಪಾಲಿಸಬೇಕು.ಸೂಚನೆಗಳು ಪಾಲನೆ ಆಗುತ್ತಿರುವ ಬಗ್ಗೆ ನಿಗಾ ವಹಿಸಲು ೬ ಮೊಬೈಲ್ ಸ್ಕ್ವಾಡ್‌ಗಳನ್ನು ರಚಿಸಲಾಗಿದ್ದು, ಅವು ಗಸ್ತಿನಲ್ಲಿ ಇರುತ್ತವೆ.ಸೂಚನೆಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದರೆ ಅಂತಹ ಅಂಗಡಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.
ಇದಲ್ಲದೆ,ತುಮಕೂರು ನಗರದಲ್ಲಿ ಕೋವಿಡ್-೧೯ರ ಪ್ರಕರಣಗಳು ಸಕ್ರಿಯವಾಗಿರುವುದರಿಂದ ತುಮಕೂರು ನಗರವನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಹೊರಗಿನಿಂದ ಬರುವವರನ್ನು ವ್ಯಾಪಕ ತಪಾಸಣೆ ಮಾಡುವಂತೆ ಪೊಲೀಸ್ ಇಲಾಖೆಗೆ ಸಚಿವರು ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್,ಎಸ್ಪಿ ಡಾ.ವಂಶಿಕೃಷ್ಣ, ಸಿಇಒ ಶುಭಕಲ್ಯಾಣ್,ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ , ಡಿಹೆಚ್‌ಒ ಡಾ. ಚಂದ್ರಿಕಾ ಮತ್ತಿತರರು ಹಾಜರಿದ್ದರು.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ತುಮಕೂರು

Please follow and like us:

Related posts

Leave a Comment