ಕೋವಿಡ್-19 ಟೆಸ್ಟ್ ಲ್ಯಾಬ್ ಸಿದ್ಧತೆಗೆ ಸೂಚನೆ

ಯಾದಗಿರಿ:ನೋವೆಲ್ ಕೊರೊನಾ ವೈರಸ್‌ಗೆ ಸಂಬAಧಿಸಿದAತೆ ನೂತನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-೧೯ ಪರೀಕ್ಷೆ ನಡೆಸುವ ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಲ್ಲಿನ ಮುದ್ನಾಳ ಸಮೀಪದ ನೂತನ ಜಿಲ್ಲಾಸ್ಪತ್ರೆಗೆ ಇಂದು ಭೇಟಿ ನೀಡಿದ ಅವರು, ಕೋವಿಡ್-೧೯ ಟೆಸ್ಟ್ ಲ್ಯಾಬ್ ಸ್ಥಾಪನೆ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್ ಪೈಪ್‌ಲೈನ್ ಕಾಮಗಾರಿ ಕೈಗೊಳ್ಳಲು ಪರಿಶೀಲನೆ ನಡೆಸಿದರು.
ಇನ್ನು ಜಿಲ್ಲಾಡಳಿತ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಕೊರೊನಾ ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್-೧೯ ಪರೀಕ್ಷೆಗಳನ್ನು ಹೆಚ್ಚು ಹೆಚ್ಚು ನಡೆಸಬೇಕಿರುತ್ತದೆ.ಅದರ ಪ್ರಯುಕ್ತ, ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಬೇಕಾದ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಾರಾಯಣಪ್ಪ, ಕೆಎಚ್‌ಎಸ್‌ಡಿಆರ್‌ಪಿ ಕಾರ್ಯನಿರ್ವಾಹಕ ಇಂಜಿನೀಯರ್ ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಕಿರಣ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಯಾದಗಿರಿ

Please follow and like us:

Related posts

Leave a Comment