50 ಸಾವಿರ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿ..

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ವಿರೋಧ ಪಕ್ಷಗಳು, ರೈತ ಸಂಘಟನೆಗಳ ಮುಖಂಡರ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.
ಈ ವೇಳೆ ಮುಖಂಡರ ನಿಯೋಗ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯಗಳನ್ನು ಮಂಡಿಸಿತು.
ಅAದ ಹಾಗೇ ರಾಜ್ಯ ವ್ಯಾಪಿ ರೈತರು ಬೆಳೆದಿರುವ ಹೂವು, ಹಣ್ಣು, ತರಕಾರಿ ಹಾಗೂ ಬೆಳೆಗಳ ಕಟಾವಿಗೆ ಅವಕಾಶ ಕಲ್ಪಿಸುವುದು ಮತ್ತು ಮಾರಾಟ ಮಾಡಲು ಸೂಕ್ತ ಸಾರಿಗೆ ವ್ಯವಸ್ಥೆ ಮತ್ತು ಮಾರುಕಟ್ಟೆಯನ್ನು ಒದಗಿಸಬೇಕು ಎಂದು ಹೇಳಿತು.
ಇನ್ನು ರೈತರು ಬೆಳೆದ ಪದಾರ್ಥಗಳನ್ನು ವ್ಯಾಪಾರಸ್ಥರು ತೆಗೆದುಕೊಳ್ಳದೇ ಇದ್ದರೆ ಸರ್ಕಾರವೇ ಅದನ್ನು ಖರೀದಿಸಿ ರೈತರಿಗೆ ಸಹಾಯ ಮಾಡಬೇಕು. ಲಾಕ್‌ಡೌನ್ ಅವಧಿಯಲ್ಲಿ ನಷ್ಟ ಅನುಭವಿಸಿರುವ ರೈತರಿಗೆ ನಷ್ಟ ಪರಿಹಾರ ನೀಡುವುದು ಹಾಗೆಯೇ ಕೋಳಿ ಸಾಕಾಣಿಕೆ ಮಾಡಿ ಮಾರಾಟವಾಗದೇ ನಷ್ಟ ಅನುಭವಿಸಿದವರಿಗೂ ಪರಿಹಾರ ನೀಡಬೇಕು ಅಂತ ಒತ್ತಾಯಿಸಿದೆ.
ಇದಲ್ಲದೆ,ಕೊರೋನಾ ರೋಗ ನಿವಾರಣೆ ಹಾಗೂ ಲಾಕ್‌ಡೌನ್‌ನಿಂದಾಗಿ ಉಂಟಾಗಿರುವ ಜನರ ಸಂಕಷ್ಟಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ಕನಿಷ್ಠ ೫೦,೦೦೦ ರೂ.ಕೋಟಿಗಳ ವಿಶೇಷ ಆರ್ಥಿಕ ಪ್ಯಾಕೇಜನ್ನು ನೀಡುವಂತೆ ರಾಜ್ಯ ಸರ್ಕಾರ ಒತ್ತಾಯಿಸಬೇಕು. ರಾಜ್ಯವ್ಯಾಪಿ ರೈತರು ಬೆಳೆದಿರುವ ಹೂವು, ಹಣ್ಣು, ತರಕಾರಿ ಹಾಗೂ ಬೆಳೆಗಳ ಕಟಾವಿಗೆ ಅವಕಾಶ ಕಲ್ಪಿಸುವುದು ಮತ್ತು ಮಾರಾಟ ಮಾಡಲು ಸೂಕ್ತ ಸಾರಿಗೆ ವ್ಯವಸ್ಥೆ ಮತ್ತು ಮಾರುಕಟ್ಟೆ ಒದಗಿಸಬೇಕು ಎಂದು ಹಕ್ಕೊತ್ತಾಯದಲ್ಲಿ ಆಗ್ರಹಿಸಲಾಗಿದೆ.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment