ಸಿಂಧನೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಸಿಂಧನೂರು(ರಾಯಚೂರು): ನೂತನ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಚಿವ. ಶಾಸಕ ವೆಂಕಟರಾವ್ ನಾಡಗೌಡ ಗುದ್ದಲಿ ಪೂಜೆ ನೇರವೇರಿಸಿದರು.
ಚುನಾವಣೆಯಲ್ಲಿ ಮತದಾರರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲು ವಿವಿಧ ಯೋಜನೆ ಅಡಿಯಲ್ಲಿ ಅನುದಾನವನ್ನು ಕ್ಷೇತ್ರಕ್ಕೆ ತಂದು ಗೊಣ್ಣಿಗನೂರು ಗ್ರಾಮದಲ್ಲಿ ೩೦.೦೦ ರೂಗಳ ವೆಚ್ಚದಲ್ಲಿ ರಸ್ತೆ ಡಾಂಬರಿಕರಣ, ಒಳಬಳ್ಳಾರಿ ಗ್ರಾಮದಲ್ಲಿ ೪೦.೦೦ ಲಕ್ಷ ರೂ.ಗಳ ವೆಚ್ಚದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ,೫.೦೦ ಲಕ್ಷ ರೂಗಳ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ,೧೦.೦೦ ಲಕ್ಷ ರೂಗಳ ವೆಚ್ಚದಲ್ಲಿ ೨ ದೇವಸ್ಥಾನ ಜೀಣೋದ್ಧಾರ ಕಾಮಗಾರಿ, ೩೩.೦೦ ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರಿಡ್ಜ್ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು.ನಂತರ ಹೆಡಗಿನಾಳ ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ ಮಾಡಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಆದಿಮನಿ ವೀರಲಕ್ಷ್ಮಿ. ಜಿಲ್ಲಾ ಪಂಚಾಯತ ಸದಸ್ಯ ಶಿವಮಗೌಡ ಗೋರೆಬಾಳ,ತಾಲೂಕು ಪಂಚಾಯತ್ ಅಧ್ಯಕ್ಷೆ ಲಕ್ಷ್ಮಿ ದೇವಿ ಅಮರೇಶ್ ಗುರಿಕಾರ, ಜೆಡಿಎಸ್ ಪಕ್ಷದ ವಕ್ತಾರ ಬಸವರಾಜ ನಾಡಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಸೈಯದ್ ಬಂದೇ ನವಾಜ್ ಎಕ್ಸ್ ಪ್ರೆಸ್ ಟಿವಿ

Please follow and like us:

Related posts

Leave a Comment