ಕಾರ್ಮಿಕರ ಸಮಾಧಿ ಮಾಡಲು ಹೊರಟ ಸರ್ಕಾರ..

ಬೆಂಗಳೂರು:ರಾಜ್ಯ ಸರ್ಕಾರ ಕಾರ್ಮಿಕರು ಹಾಗೂ ರೈತರ ಸಮಾಧಿ ಮಾಡುವ ಕೆಲಸಕ್ಕೆ ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಕೆಪಿಸಿಸಿ ಕಛೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯರೊಂದಿಗೆ ಜಂಟಿ ಸುದ್ಧಿಗೋಷ್ಟಿ ನಡೆಸಿದ ಅವರು, ಸರ್ಕಾರ ಎಲ್ಲಾ ವರ್ಗದ ಜನರನ್ನು ಸರಿಸಮಾನಗಾಗಿ ನೋಡುವಲ್ಲಿ ವಿಫಲವಾಗಿದೆ. ಮೇಲ್ವರ್ಗದ ಜನರ ಮಾತು ಕೇಳಿಕೊಂಡು ಬಿಜೆಪಿ ನಾಯಕರು ಸರ್ಕಾರ ನಡೆಸುತ್ತಿದ್ದಾರೆ. ಕಾರ್ಮಿಕ ಕಾಯ್ದೆಯ ವಿಚಾರದಲ್ಲಿ ಸಾಕಷ್ಟು ತಿದ್ದುಪಡಿ ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದಲ್ಲದೆ, ರಾಜ್ಯ ಸರ್ಕಾರ ಜಾರಿ ಮಾಡಲು ನಿರ್ಧರಿಸಿರುವ ನೂತನ ತಿದ್ದುಪಡಿ ಕಾಯ್ದೆಯ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಿದ್ದೇವೆ.ರೈತರ ಮತ್ತು ಕಾರ್ಮಿಕರ ಪರ ಕಾಂಗ್ರೆಸ್ ಪಕ್ಷ ನಿಲ್ಲಲಿದೆ ಎಂದು ತಿಳಿಸಿದರು.

ನ್ಯೂಸ್ ಬ್ಯೂರೋ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment