ಆರೋಗ್ಯ / HEALTH

ಮಾನವಿ ಪೊಲೀಸ್ ಠಾಣೆಯಲ್ಲಿ ಕೊರೊನಾ ಜಾಗೃತಿ ಕೇಂದ್ರ…

Published

on

ಮಾನವಿ(ರಾಯಚೂರು): ಮಾನವಿ ಪೊಲೀಸ್ ಠಾಣೆಯಲ್ಲಿ ಕೊರೊನಾ ಸೋಂಕನ್ನು ತಡೆಗಟ್ಟುವ ಹಾಗೂ ಪೊಲೀಸ್ ಠಾಣೆಗೆ ಬರುವ ಜನರಿಗೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಮತ್ತು ಸಾನಿಟೈಸರ್‌ನ್ನು ಬಳಸುವ ಸಲುವಾಗಿ ಸುಮಾರು ನೂರು ಮೀಟರ್ ಅಂತರದಲ್ಲಿ ತಪಾಸಣಾ ಕೇಂದ್ರ ಆರಂಭಿಸಲಾಗಿದೆ.
ಅAದ ಹಾಗೇ ಜನರು ನೇರವಾಗಿ ಪೊಲೀಸ್ ಠಾಣೆಯ ಒಳಗೆ ಹೋಗುವುದನ್ನು ತಡೆಯಲಾಗುತ್ತೆ.ಮೊದಲು ಇಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಉಪಯೋಗಿಸಿಕೊಳ್ಳಬೇಕು.ನಂತರ ಅವರ ಅಹವಾಲುಳಗಳನ್ನು ವಿಚಾರಿಸಿಲಾಗುತ್ತದೆ.ಠಾಣೆಯ ಒಳಗೆ ಹೋಗುವ ಅವಶ್ಯಕತೆ ಇದ್ದರೆ ಮಾತ್ರ ಅವರಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಆ ನಂತರದಲ್ಲಿ ಠಾಣೆಯ ಒಳಗೆ ಹೋಗಲು ಅನುಕೂಲ ಮಾಡಿಕೊಡಲಾಗುತ್ತದೆ.ಇದೇ ರೀತಿಯಲ್ಲಿ ಜಿಲ್ಲೆಯ ಎಲ್ಲಾ ಠಾಣೆಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.
ಹೀಗಾಗಿ ಸಾರ್ವಜನಿಕರು ಕೊರೊನಾ ಸೋಂಕು ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಿ ಸಾರ್ವಜನಿಕ ಸ್ಥಳದಲ್ಲಿ ಹಾಗೂ ಪೊಲೀಸ್ ಠಾಣೆಗಳಿಗೆ ಬರುವ ಸಮಯದಲ್ಲಿ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕಾಗಿದೆ.

ಸುಲ್ತಾನ್ ಬಾಬ ಎಕ್ಸ್ ಪ್ರೆಸ್ ಟಿವಿ ಮಾನವಿ(ರಾಯಚೂರು)

Click to comment

Trending

Exit mobile version