ರಾಜ್ಯದಲ್ಲಿ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ಯಶ್ವಸಿಯಾದ ಪ್ಲಾಸ್ಮಾ ಥೆರಪಿ ಚಿಕಿತ್ಸೆ..

ಹುಬ್ಬಳ್ಳಿ : ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಿಮ್ಸ್ ಮತ್ತೊಂದು ಸಾಧನೆ ಮಾಡಿದೆ.ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದ ಕಿಮ್ಸ್ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.
ಕೊವೀಡ್ ಸೊಂಕಿತರನ್ನು ಗುಣಮುಖರನ್ನಾಗಿ ಮಾಡಲು ಪಾಸ್ಮಾ ಥೆರಪಿ ಚಿಕಿತ್ಸೆ ಪ್ರಯೋಗ ಮಾಡಲಾಗಿತ್ತು.ಆದರೆ ಹಲವೆಡೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ವಿಫಲವಾದ ನಂತರ ಇದೀಗ ರಾಜ್ಯದಲ್ಲಿ ಮೊದಲ ಭಾರಿಗೆ ಹುಬ್ಬಳ್ಳಿಯಲ್ಲಿ ಪಾಸ್ಮಾ ಥೆರಪಿ ಚಿಕಿತ್ಸೆ ಯಶ್ವಸಿಯಾಗಿದೆ.
ಹುಬ್ಬಳ್ಳಿಯ ಕೋವಿಡ ಸೊಂಕಿತ ಪಿ-೩೬೩ರಿಂದ ಪ್ಲಾಸ್ಮಾ ಡೋನೇಟ್ ಪಡೆದು ಮುಂಬೈನಿAದ ರಾಜ್ಯಕ್ಕೆ ವಾಪಸ್ ಆಗಿದ್ದ ಪಿ-೨೭೧೦ಗೆ ಪ್ಲಾಸ್ಮಾ ಥೆರಪಿ ಮಾಡಿ ವೈದ್ಯರ ತಂಡ ಯಶಸ್ಸು ಸಾಧಿಸಿದೆ.ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಈ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಕಿಮ್ಸ್ನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ನೀಡಲು ಐಸಿಎಂಆರ್ ನಿಂದ ಅನುಮತಿ ನೀಡಿದ್ದು,ರಾಜ್ಯದಲ್ಲಿ ಹುಬ್ಬಳ್ಳಿಯ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಮಾತ್ರ ಅನುಮತಿ ನೀಡಲಾಗಿದ್ದು,ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕಿಮ್ಸ್ ವೈದ್ಯರು ಸಿದ್ದತೆ ಮಾಡಿಕೊಂಡಿದ್ದರು.
ಆದರೆ ಕೊವಿಡ್ ಸೋಂಕಿನಿAದ ಗುಣಮುಖರಾದ ರೋಗಿಗಳು ಬ್ಲಡ್ ನೀಡಲು ಮೊದಲಿಗೆ ಹಿಂದೇಟು ಹಾಕುತ್ತಿದ್ದರು.ಆದರೆ ಕಿಮ್ಸ್ ಆಡಳಿತ ಮಂಡಳಿ ಗುಣಮುಖರಾದವರನ್ನು ಮನವೊಲಿಸಿ ಯಶಸ್ವಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮಾಡಿರುವುದು ವಿಶೇಷವಾಗಿದೆ.
ಹಲವಾರು ಸವಾಲುಗಳನ್ನು ಮುಂದಿಟ್ಟುಕೊAಡು ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ರಾಜ್ಯದಲ್ಲಿಯೇ ಮೊದಲ ಯಶಸ್ವಿ ಪ್ಲಾಸ್ಮಾಥೆರಪಿ ಚಿಕಿತ್ಸೆ ಮಾಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡುವ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲನ್ನು ಸೃಷಿಸಿದೆಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ವೈದ್ಯರ ತಂಡವನ್ನ ಶ್ಲಾಘಿಸಿದ್ದಾರೆ.

ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment