ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯ..

ಶಿರಾ(ತುಮಕೂರು): ಜಿಲ್ಲೆಯ ಶಿರಾ ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸಾಲದ ಮೊತ್ತ ಜಮಾ ಮಾಡಿರುವ ಆದೇಶ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.
ಅಂದ ಹಾಗೇ ಕಾರ್ಯಕ್ರಮದಲ್ಲಿ ಬ್ಯಾಂಕ್‌ನ ನಿರ್ದೇಶಕ ಜಿ.ಎಸ್.ರವಿ ಬೀದಿ ಬದಿ ವ್ಯಾಪಾರಿಗಳಿಗೆ ನೇರವಾಗಿ ಅವರ ಶೂನ್ಯ ಉಳಿತಾಯ ಖಾತೆಗೆ ಸಾಲದ ಮೊತ್ತ ಜಮಾ ಮಾಡಿರುವ ಆದೇಶ ಪತ್ರಗಳನ್ನು ವಿತರಿಸಿದರು.
ಬಳಿಕ ಮಾತನಾಡಿದ ಅವರು,ಲಾಕ್‌ಡೌನ್‌ನಿಂದ ಬೀದಿ ಬದಿ ವ್ಯಾಪಾರಸ್ಥರು ಆರ್ಥಿಕ ಮುಗ್ಗಟ್ಟಿನಿಂದ ಕಷ್ಟಪಡುತ್ತಿದ್ದಾರೆ.ಜೀವನೋಪಾಯಕ್ಕೆ ಅನ್ಯ ಮಾರ್ಗವಿಲ್ಲದೆ ಖಾಸಗಿ ಲೇವಾದೇವಿ ಸಂಸ್ಥೆಯ ಶೋಷಣೆಗೆ ಒಳಗಾಗುತ್ತಿರುವುದನ್ನು ಅರಿತು ಬ್ಯಾಂಕ್ ಆಡಳಿತ ಮಂಡಳಿ ಈ ವ್ಯಾಪಾರಸ್ಥರಿಗೆ ಸಾಲ ನೀಡಲು ತೀರ್ಮಾನ ಕೈಗೊಂಡಿದೆ ಎಂದರು.
ಯಾವುದೇ ರೀತಿಯ ಆಧಾರ ಇಲ್ಲದೇ ಬಡವರ ಬಂಧು ಯೋಜನೆಯಡಿ ಸಾಲ ನೀಡಲಾಗುವುದು.ಜಿಲ್ಲೆಯ ೧೦ತಾಲ್ಲೂಕುಗಳನಿರ್ದೇಶಕರು ತಮ್ಮ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ತಾವುಗಳೇ ಸಾಲದ ಚೆಕ್ ವಿತರಿಸಬಹುದು.ಇದಕ್ಕೆ ಅಧ್ಯಕ್ಷರನ್ನು ಕಾಯುವ ಅಗತ್ಯವಿಲ್ಲ ಎಂದು ಹೇಳಿದರು. ಈ ವೇಳೆ ಬ್ಯಾಂಕ್ ಅಧಿಕಾರಿಗಳು,ತಾಲ್ಲೂಕು ಮೇಲ್ವಿಚಾರಕರು ಮತ್ತಿತರ ಹಾಜರಿದ್ದರು.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ಶಿರಾ(ತುಮಕೂರು)

Please follow and like us:

Related posts

Leave a Comment