ತಿಪಟೂರು

ರಾಜಗೃಹದ ಮೇಲಿನ ದಾಳಿ ಖಂಡಿಸಿ ಡಿ.ಎಸ್.ಎಸ್. ಪ್ರತಿಭಟನೆ.

Published

on

ತಿಪಟೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ರಾಜಗೃಹದ ಮೇಲೆ ದಾಳಿ ಮಾಡಿರುವ ಕಿಡಿಗೇಡಿಗಳ ಕೃತ್ಯ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಾದಾ ಸಾಹೇಬ್ ಎನ್ .ಮೂರ್ತಿ ಸ್ಥಾಪಿತ) ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ತಾಲ್ಲೂಕು ಉಪಾಧ್ಯಕ್ಷ ಅಶೋಕ್ ಗೌಡನಕಟ್ಟೆ ಮಾತನಾಡಿ ಸಂವಿಧಾನದ ಮೂಲಕ ಸಾಮಾಜಿಕ ನ್ಯಾಯ ಎಂಬ ತತ್ವವನ್ನು ಸಾರಿ ಇಡೀ ವಿಶ್ವಕ್ಕೆ ಮಾದರಿಯಾದ ಸಂವಿಧಾನ ರಚಿಸಿದ ಮಹಾ ಮಾನವತಾವಾದಿ ಅಂಬೇಡ್ಕರ್ ನಿವಾಸಕ್ಕೆ ಕಿಡಿಗೇಡಿಗಳು ದಾಳಿಮಾಡಿರುವ ಕೃತ್ಯ ತೀವ್ರ ಖಂಡನೀಯವಾದದು ಎಂದು ಕಿಡಿಕಾರಿದರು. ಮಹಾರಾಷ್ಟ್ರದ ದಾದರ್ ನಲ್ಲಿರುವ ಅಂಬೇಡ್ಕರ್ ನಿವಾಸ ರಾಜಗೃಹದ ಮೇಲಿನ ದಾಳಿಯು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದ್ದು , ದಾಳಿಯ ನೈತಿಕ ಹೊಣೆಯನ್ನು ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರ ಹೊರಬೇಕಿದೆ ಅಂಬೇಡ್ಕರ್ ನಿವಾಸದ ಮೇಲಿನ ದಾಳಿಯು ಅಂಬೇಡ್ಕರ್ರವರ ಅನುಯಾಯಿಗಳು ಹಾಗೂ ಪ್ರಜಾಪ್ರಭುತ್ವವಾದಿಗಳಲ್ಲಿ ನೋವು ತಂದಿದೆ. ಇಡೀ ದೇಶದ ಚಿತ್ರಣ ಬದಲಿಸಿದ ಸಂವಿಧಾನ ರಚಿಸಿದವರ ಮನೆಗೆ ರಕ್ಷಣೆ ಇಲ್ಲವಾಗಿದೆ. ಪ್ರಜಾಪ್ರಭುತ್ವದಲ್ಲಿ ಸರ್ವರಿಗೂ ಸಮ ಪಾಲು, ಸಮ ಬಾಳು ಎಂಬ ಆದರ್ಶ ಸಾರಿದ್ದ ಅಂತಹ ಧೀಮಂತ ನಾಯಕರಿಗೆ ಅವಮಾನಿಸಿದವರನ್ನು ಕಾನೂನು ರೀತಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಆರೋಪಿಗಳನ್ನ ಬಂದಿಸಿ ದೇಶದಿಂದ ಗಡಿಪಾರು ಮಾಡಬೇಕು, ಕೊರೋನಾ ಹಿನ್ನಲೆ ಸಾಂಕೇತಿಕ ಹೋರಾಟ ಮಾತ್ರ ಮಾಡಲಾಗಿದ್ದು ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಮುಂದುವರೆದರೆ ಉಗ್ರಹೋರಾಟ ಮಾಡುವುದಾಗಿ ತಿಳಿಸಿದರು.

ಸಿದ್ದೇಶ್ವರ ಸಿಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Click to comment

Trending

Exit mobile version