ಐಪಿಎಲ್ ಟೂರ್ನ್ ನಿಂದ ಹೊರ ನಡೆದ ಸುರೇಶ್ ರೈನಾ..!

ದುಬೈ : ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಹೊಡೆತ ಬಿದ್ದಿದೆ. ಚೆನ್ನೈ ಸೂಪರ್ಕಿಂಗ್ಸ್ ಅನುಭವಿ ಆಟಗಾರ ಸುರೇಶ್ ರೈನಾ ಟೂರ್ನಿಯಿಂದ ಹೊರ ಬಂದಿದ್ದಾರೆ. ಈ ಬಾರಿ ದುಬೈನಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಗೆ ಈಗಾಗಲೇ ಎಲ್ಲಾ ತಂಡಗಳು ಹಾಜರಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ದೀಪಕ್ ಚಹರ್ ಹಾಗು ತಂಡದ ಕೆಲ ಸದಸ್ಯರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು ಎಂದು ಸುದ್ದಿಯಾಗಿತ್ತು. ಇದೀಗ ಸುರೇಶ್ ರೈನಾ ಟೂರ್ನಿಯಿಂದ ಹೊರ ಬಂದಿದ್ದಾರೆಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವೇ ಹೇಳಿಕೊಂಡಿದೆ. ಈ ಬಗ್ಗೆ ಸ್ವತಃ ಸಿಇಒ ವಿಶ್ವನಾಥ್, ಸುರೇಶ್ ರೈನಾ ಅವರು ವೈಯಕ್ತಿಕ ಕಾರಣಗಳಿಂದ ಭಾರತಕ್ಕೆ ವಾಪಸ್ ತೆರಳುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸುರೇಶ್ ರೈನಾ ಮತ್ತು ಅವರ ಕುಟುಂಬಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Please follow and like us:

Related posts

Leave a Comment