Uncategorized

ಕಾಂಗ್ರೆಸ್ ಪಕ್ಷದಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮ..!

Published

on

ಕೂಡ್ಲಿಗಿ: ಕೂಡ್ಲಿಗಿ ತಾಲೂಕಿನ ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಆರೋಗ್ಯ ಹಸ್ತ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೋನಾ ರೋಗವನ್ನು ಪತ್ತೆಹಚ್ಚುವುದಕ್ಕೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಬ್ಬ ಟೆಕ್ನಿಷಿಯನ್ ಮತ್ತು ಒಬ್ಬ ಸಹಾಯಕನನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು ಆಯ್ಕೆ ಮಾಡಿಕೊಂಡಿರುತ್ತಾರೆ. ಟೆಕ್ನಿಷನ್ ಮತ್ತು ಸಹಾಯಕರು ಕೂಡ್ಲಿಗಿ ತಾಲೂಕಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಮ್ಮುಖದಲ್ಲಿ ತರಭೇತಿಯನ್ನು ಕೊಟ್ಟಿರುತ್ತಾರೆ. ಗಂಡಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೋನಾ ರೋಗವನ್ನು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಟೆಸ್ಟ್ ಮಾಡಿಸಿಕೊಳ್ಳ ಬಹುದು ಯಾಕೆಂದರೆ ದಿನದಿಂದ ದಿನಕ್ಕೆ ಕೊರೋನಾ ರೋಗ ಹಳ್ಳಿಗಳಲ್ಲಿ ಹರಡುವುದರಿಂದ ಮುಂಜಾಗ್ರತ ಕ್ರಮವಾಗಿ ಟೆಸ್ಟ್ ಮಾಡಿಸಿಕೊಂಡರೆ ಒಳ್ಳೆಯದು. ಕೊರೋನಾ ರೋಗ ಲಕ್ಷಣಗಳು ಕಂಡು ಬಂದರೆ ಕೋವಿಡ್ 19 ಆರೋಗ್ಯ ಕೇಂದ್ರದಲ್ಲಿ ದಾಖಲಾಗಬೇಕು ಎಂದರು. ಇನ್ನೂ ಈ ಸಂದರ್ಭದಲ್ಲಿ DMLT ಟೆಕ್ನಿಷನ್ ಅವರು ಮಾತನಾಡಿ ಕೊರೋನಾ ರೋಗದ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ ನಾವುಗಳು ಎಲ್ಲರೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಹೊರಗಡೆ ಬಂದಾಗ ಮುಖಕ್ಕೆ ಮಾಸ್ ಹಾಕಿಕೊಳ್ಳಬೇಕು ಮನೆಯಲ್ಲಿ ಕೈಗಳನ್ನು ಸಾಬೂನಿನಿಂದ ತೊಳೆದುಕೊಳ್ಳಬೇಕು ಸಾರ್ವಜನಿಕರು ಟೆಸ್ಟ್ ಮಾಡಿಸಿಕೊಳ್ಳುವುದಕ್ಕೆ ಮುಂದೆ ಬರುತ್ತಿಲ್ಲ ಭಯಪಡುತ್ತಿದ್ದಾರೆ ಸಾರ್ವಜನಿಕರು ಭಯಪಡದೆ ಟೆಸ್ಟ್ ಮಾಡಿಸಿಕೊಂಡರೆ ಒಳ್ಳೆಯದು ಎಂದು ತಿಳಿಸಿದರು

ವರದಿ-ನಂದೀಶ ನಾಯಕ್ ಎಕ್ಸ್ ಪ್ರೆಸ್ ಟಿವಿ

Click to comment

Trending

Exit mobile version