ನವದೆಹಲಿ

ಕೋವಿಡ್ ಗುಣಮುಖ ಪ್ರಮಾಣದಲ್ಲಿ ಏರಿಕೆ : ಅಮೇರಿಕಾ ಹಿಂದಿಕ್ಕಿದ ಭಾರತ…!

Published

on

ನವದೆಹಲಿ : ವಿಶ್ವದಾದ್ಯಂತ ಕೊರೊನಾ ಸೋಂಕು ಹೆಚ್ಚಾಗುತ್ತಿದ್ರೆ, ಇತ್ತ ಭಾರತದಲ್ಲಿ ಕೊವಿಡ್ನಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದ್ದು, ಇದೀಗ ಅಮೇರಿಕಾ ಹಿಂದಿಕ್ಕಿ ಭಾರತ ಅಗ್ರಸ್ಥಾನದಲ್ಲಿದೆ. ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಈ ವರೆಗೂ ಸೋಂಕಿನಿಂದ 43, 14, 606 ಮಂದಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದು,ಒಟ್ಟಾರೆ ಕೋವಿಡ್ ಸೋಂಕಿತರ ಪೈಕಿ ಭಾರತದಲ್ಲಿ ಶೇ.19.00ರಷ್ಟು ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ಅಮೆರಿಕದಲ್ಲಿ ಈ ವರೆಗೂ 42, 25, 993 ಮಂದಿ ಸೋಂಕಿತರು ಗುಣಮುಖರಾಗಿದ್ದು, ಜಾಗತಿಕವಾಗಿ ಅಮೆರಿಕದ ಚೇತರಿಕೆ ಪ್ರಮಾಣ ಶೇ.18.70ರಷ್ಟಿದೆ ಎನ್ನಲಾಗಿದ. ನಿನ್ನೆ ಭಾರತದಲ್ಲಿ 92,605 ಪ್ರಕರಣ ಪತ್ತೆಯಾಗಿದ್ದು,94,612 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಭಾರತದಲ್ಲಿ ಗುಣಮುಖರಾದವರ ಸಂಖ್ಯೆ 43,03,044 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ 1,133 ಮಂದಿ ಸಾವನ್ನಪ್ಪಿದ್ದು,ಆ ಮೂಲಕ ಕೊರೋನಾ ವೈರಸ್ ಗೆ ದೇಶದಲ್ಲಿ ಬಲಿಯಾದವರ ಸಂಖ್ಯೆ 86,752ಕ್ಕೆ ಏರಿಕೆಯಾಗಿದೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version