ತುಮಕೂರು

ಕ್ಷುಲ್ಲಕ ಕಾರಣಕ್ಕೆ ಮಾಜಿ ಉಪಮೇಯರ್ ಮೇಲೆ ಮಚ್ಚಿನಿಂದ ಹಲ್ಲೆ- ಎಲ್ಲಿ?

Published

on

ತುಮಕೂರು : ಕ್ಷುಲ್ಲಕ ಕಾರಣಕ್ಕೆ ಮಾಜಿ ಉಪಮೇಯರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಇಲ್ಲಿನ ಮೆಳೆಕೋಟೆ ಬಳಿ ತಡರಾತ್ರಿಯಾದರೂ ಅನಗತ್ಯವಾಗಿ ಓಡಾಡುತ್ತಿದ್ದ ಗುಂಪೊಂದನ್ನ ತಡೆದ ಮಾಜಿ ಉಪಮೇಯರ್ ವೆಂಕಟೇಶ್ ಪ್ರಶ್ನೆ ಮಾಡಿದ್ದಾರೆ. ಮನೆಗೆ ಹೋದಂತೆ ನಾಟಕವಾಡಿದ ಗುಂಪು, ಮನೆಯಿಂದ ಮಚ್ಚು ತಂದು ವೆಂಕಟೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ಉಪಮೇಯರ್ ತಲೆಗೆ ಗಾಯವಾಗಿದ್ದು,ವೆಂಕಟೇಶ್ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ತಿಲಕ್ ಪಾರ್ಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version