ಹುಬ್ಬಳ್ಳಿ-ಧಾರವಾಡ

ಮಳೆಯಿಂದ ಅತಿವೃಷ್ಟಿಯಿಂದ ಕಂಗಾಲಾದ ರೈತವರ್ಗ-ಪರಿಹಾರಕ್ಕಾಗಿ ಪಟ್ಟು ಹಿಡಿದ ರೈತರು..!

Published

on

ಹುಬ್ಬಳ್ಳಿ: ಅತಿಯಾಗಿ ಸುರಿದ ಬಾರಿ ಮಳೆಯಿಂದ ಅತಿವೃಷ್ಟಿಯಿಂದ ತಾಲೂಕಿನ ನವಲಗುಂದ ವ್ಯಾಪ್ತಿಯಲ್ಲಿ ಬರುವ ಗ್ರಾಮದಲ್ಲಿ ನೂರಾರು ಮನೆಗಳು ಬಿದ್ದಿದ್ದು’ ಅದರ ಜೊತೆಗೆ ಮುಂಗಾರು ಬೆಳೆಗಳು ಹಾನಿಯಾಗಿವೆ ಜಿಲ್ಲಾಡಳಿತ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆಯನ್ನು ನಡೆಸಿದರು. ನಗರದ ತಹಶಿಲ್ದಾರರ ಕಚೇರಿ ಎದುರುಗಡೆ ಪ್ರತಿಭಟನೆ ಮಾಡಿದ್ದು, ಕಳೆದ ವರ್ಷವೂ ಸಹ ಅತಿಯಾದ ಮಳೆಯಿಂದಾಗಿ ನೂರಾರು ಮನೆಗಳು ಬಿದ್ದಿವೆ, ಮತ್ತು ಮುಂಗಾರು ಬೆಳೆಗಳಾದ ಶೇಂಗಾ, ಹತ್ತಿ,ಹೆಸರು,ಹಲಸಂದಿ, ಸೇರಿದಂತೆ ಎಲ್ಲಾ ಬೆಳೆಗಳು ನಾಶವಾಗಿವೆ, ಇದರಿಂದಾಗಿ ರೈತರು ಹಾಗೂ ನವಲಗುಂದ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮಸ್ಥರು ಜೀವನ ನಡೆಸುವುದು ಕಷ್ಟವಾಗಿದೆ, ಆದ್ದರಿಂದ ಕೂಡಲೇ ರಾಜ್ಯ ಸರಕಾರ ಬೆಳೆವಿಮೆ ಹಾಗೂ ಮನೆ ಕಳೆದುಕೊಂಡವರಿಗೆ ನೆರೆ ಪರಿಹಾರ ನೀಡುವಂತೆ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆದಷ್ಟು ಬೇಗ ಪರಿಹಾರ ನೀಡದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ವರದಿ-ರಾಜು ಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Click to comment

Trending

Exit mobile version