ಮಂಡ್ಯ

ಅಂಬೇಡ್ಕರ್ ಹಿಂದು ಧರ್ಮ ತೊರೆದು ಬೌದ್ದ ಧರ್ಮ ಸ್ವೀಕರಿಸಿದ ದಿನ..!

Published

on

ಮಳವಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರು ಹಿಂದು ಧರ್ಮ ತೊರೆದು ಬೌದ್ದ ಧರ್ಮ ಸ್ವೀಕರಿಸಿದ ಹಿನ್ನಲೆಯಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ವಿಚಾರ ವೇದಿಕೆ ಹಾಗೂ ಭಾರತೀಯ ಬೌದ್ಧ ಮಹಾಸಭಾ ವತಿಯಿಂದ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ವಿಶೇಷ ಪೂಜೆ ಮಳವಳ್ಳಿ ಪಟ್ಟಣದಲ್ಲಿ ನಡೆಸಲಾಯಿತು. ಮಳವಳ್ಳಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ವಿಚಾರ ವೇದಿಕೆ ಕಚೇರಿಯಲ್ಲಿ ಬಿ.ಆರ್ ಅಂಬೇಡ್ಕರ್ ವಿಚಾರ ವೇದಿಕೆ ಹಾಗೂ ಭಾರತೀಯ ಬೌದ್ಧ ಮಹಾಸಭಾ ಅಧ್ಯಕ್ಷ ಎಂ.ಆರ್ ಮಹೇಶ್ ರವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ವಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.ಬಳಿಕ ಬಿ.ಆರ್ ಅಂಬೇಡ್ಕರ್ ವಿಚಾರ ವೇದಿಕೆ ಹಾಗೂ ಭಾರತೀಯ ಬೌದ್ಧ ಮಹಾಸಭಾ ಅಧ್ಯಕ್ಷ ಎಂ.ಆರ್ ಮಹೇಶ್ ರವರು ಮಾತನಾಡಿ, ಅಸಮಾನತೆ, ಜಾತೀಯತೆ ತಾಂಡವವಾಡುತ್ತಿದ್ದ ವಿರುದ್ದ ಹೋರಾಟ ನಡೆಸಿ ಬೇಸತ್ತು ಹಿಂದೂ ಧರ್ಮದಲ್ಲಿ ಹುಟ್ಟಿ ಹಿಂದೂ ಧರ್ಮ ಸಾಯಬಾರದು ಎಂದು ಬೌದ್ಧ ಧರ್ಮ ವನ್ನು ಸೇರಿದರು ಎಂದು ನೆನೆಪು ಮಾಡಿಕೊಂಡರು.ಕಾರ್ಯಕ್ರಮದಲ್ಲಿ ವಿಚಾರ ವೇದಿಕೆ ಪ್ರಧಾನ ಕಾರ್ಯದರ್ಶಿ ಕಾಂತರಾಜು, ಡಿಎಸ್ ಎಸ್ ಸಂಚಾಲಕ ಯತೀಸ್, ಚಿಕ್ಕಸಿದ್ದಯ್ಯ, ಸುರೇಶ,ಸೇರಿದಂತೆ ಮತ್ತಿತ್ತರರು ಇದ್ದರು

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version