ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದ ಹೊಸಕೋಟೆ ಗ್ರಾಮದ ಮಧ್ಯದ ರಸ್ತೆ ಬದಿಯಲ್ಲಿ ಬೆಂಕಿ ಹತ್ತಿಕೊಂಡು ಉರಿಯುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹ ಹೊತ್ತಿ ಉರಿಯುವುದನ್ನು ಕಂಡ ಕೆಲ್ಲೂರು ಗ್ರಾಮಸ್ಥರು ಪಿರಿಯಪಟ್ಟಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶಾಂತ್ ಮತ್ತು ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮಹಿಳೆಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದು, ಮಹಿಳೆಯನ್ನು ಕೊಲೆ ಮಾಡಿ ರಸ್ತೆ ಬದಿಯಲ್ಲಿ ಸುಟ್ಟು ಹಾಕಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ವರದಿ-ರಾಮೇಗೌಡ ಎಕ್ಸ್ ಪ್ರೆಸ್ ಟಿವಿ ಪಿರಿಯಾಪಟ್ಟಣ