ಹುಬ್ಬಳ್ಳಿ-ಧಾರವಾಡ

ಹಾಡುಹಗಲೇ ಕೊಲೆ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ಬೆಚ್ಚಿ ಬಿದ್ದ ಹುಬ್ಬಳ್ಳಿ ಜನತೆ..!

Published

on

ಹುಬ್ಬಳ್ಳಿ:ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಕಮರಿಪೇಟೆ ನಿವಾಸಿಯಾಗಿರುವ ರಮೇಶ್ ಭಾಂಡಗೆಗೆ ಹಲವು ಬಾರಿ ಚಾಕುವಿನಿಂದ ಇರಿಯಲಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನ ಕಲೆ ಹಾಕುತ್ತಿದ್ದ ರಮೇಶ್ ಭಾಂಡ ಕೆಲವರೊಂದಿಗೆ ದುಷ್ಮನಿ ಬೆಳೆಸಿಕೊಂಡಿದ್ದರು ಎನ್ನಲಾಗಿದೆ. ಚಾಕು ಇರಿದ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ರಮೇಶ್ ಭಾಂಡಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಸಾವನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ವರದಿ-ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Click to comment

Trending

Exit mobile version