ಕಲಬುರಗಿ

ಜಯಕರ್ನಾಟಕ ಸಂಘಟನೆ ವತಿಯಿಂದ ಕೊರೊನಾ ವಾರಿಯರ್ಸ್ ಗೆ ಸನ್ಮಾನ..

Published

on

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಗುರುಭವನದಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಕೊರೊನಾ ವಾರಿಯರ್ಸ್‌ಗಳ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಮಾತನಾಡಿದ ಕನ್ನಡಪರ ಹೋರಾಟಗಾರ ಅರುಣ ಕುಮಾರ್ ಪಾಟೀಲ್ ರಾಜ್ಯಸರ್ಕಾರದ ಕನ್ನಡ ವಿರೋಧಿ ನೀತಿಯಿಂದಾಗಿ ಕನ್ನಡ ಭಾಷೆ, ಸಂಸ್ಕೃತಿಗೆ ಧಕ್ಕೆ ಉಂಟಾಗಿದೆ ಎಂದರು. ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಕೊರಳ್ಳಿ ಮಾತನಾಡಿ, ಪೋಷಕರು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಕನ್ನಡ ಅಭಿಮಾನ ಬೆಳೆದಾಗ ಮಾತ್ರ ನಾಡು ನುಡಿ ಬೆಳೆಯಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಮಾದನ ಹಿಪ್ಪರಗಾದ ಅಭಿನವ ಶಿವಲಿಂಗ ಸ್ವಾಮೀಜಿ, ಸಂಘಟನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ರಾಮಚಂದ್ರಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ, ರಾಕೇಶ ಕಲ್ಲೂರು ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಕೊರೊನಾ ವಾರಿಯರ್ಸ್‌ಗಳಾದ ಆಶಾ ಕಾರ್ಯಕರ್ತೆಯರು, ಪುರಸಭೆ, ಪಂಚಾಯಿತಿ ನೌಕರರು, ಪೊಲೀಸ್‌ ಸಿಬ್ಬಂದಿ, ಶಿಕ್ಷಕರು,ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ವರದಿ-ರಾಜಕುಮಾರ್ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Click to comment

Trending

Exit mobile version