ಕೊಡಗು

ಪಿಕಪ್ ಹಾಗೂ ಓಮ್ನಿ ನಡುವೆ ಭೀಕರ ಅಪಘಾತ- ಇಬ್ಬರು ಸಾವು..!

Published

on

ಕೊಡಗು: ಪಿಕಪ್ ಮತ್ತು ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭೇತ್ರಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಹರೀಶ್ ಎಂದು ಗುರುತಿಸಲಾಗಿದೆ. ಪಿಕಪ್ ಬಂದು ಗುದ್ದಿದ ರಭಸಕ್ಕೆ ಓಮ್ನಿ ನಜ್ಜುಗುಜ್ಜಾಗಿದೆ. ಓಮ್ನಿ ಚಾಲಕ ಹರೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಗಾಯಗೊಂಡ ಸುಬ್ರಮಣಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಸಾನ್ನಪ್ಪಿದ್ದಾರೆ. ಈ ಮೂಲಕ ಅಪಘಾತದಲ್ಲಿ ಮೃತರಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಮೃತಪಟ್ಟವರಿಬ್ಬರು ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದವರಾಗಿದ್ದಾರೆ. ಈ ಅಪಘಾತ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version