Uncategorized

ಯುವಕರ ಮೇಲೆ ಸಿಮೆಂಟ್ ಕಟ್ಟಡ ಕುಸಿತ- ಪ್ರಾಣಪಾಯದಿಂದ ಪಾರಾದ ಯುವಕರು..!

Published

on

ರಾಜಸ್ಥಾನ: ನಗರದ ಮಾರುಕಟ್ಟೆಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕರ ಮೇಲೆ ನಿರ್ಮಾಣ ಹಂತದ ಕಟ್ಟಡದ ಸಿಮೆಂಟ್ ಕಂಬವೊಂದು ಕುಸಿದು ಬಿದ್ದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಭರತ್‌ಪುರದ ಸರಫಾ ಮಾರುಕಟ್ಟೆಯಲ್ಲಿ ಬುಧವಾರ ನಡೆದಿದೆ.ಘಟನೆಯಲ್ಲಿ ಇಬ್ಬರು ಯುವಕರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಟ್ಟಡದ ಮೂರನೇ ಮಹಡಿಯಿಂದ ಸಿಮೆಂಟ್ ಕಂಬವೊಂದು ಕುಸಿದು ರಸ್ತೆಯಲ್ಲಿ ನೆಡೆದುಕೊಂಡು ಹೋಗುತ್ತಿದ್ದ ಓರ್ವ ಯುವಕನ ತಲೆಯಮೇಲೆ ಬಿದ್ದಿದೆ ಪರಿಣಾಮ ಓರ್ವ ಗಂಭೀರ ಗಾಯಗೊಂಡು ಇನ್ನೋರ್ವ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಪಾರಾಗಿದ್ದಾನೆ. ಗಂಭೀರ ಗಾಯಗೊಂಡ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸರಫಾ ಮಾರುಕಟ್ಟೆ ಸದಾ ಜನಜಂಗುಳಿಯಿಂದ ಕೊಡಿರುವ ರಸ್ತೆಯಾಗಿದ್ದು ಕಂಬ ಕುಸಿದು ಬೀಳುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಬೆಚ್ಚಿ ಬೀಳಿಸುವಂತಿದೆ.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version