ಮಂಡ್ಯ

ವೈಕುಂಠ ಏಕಾದಶಿ ಪ್ರಯುಕ್ತ ಶಾಙ್ಗ ಪಾಣಿ ದೇವಸ್ಥಾನದಲ್ಲಿ ವಿಶೇಷ ಪೂಜೆ..!

Published

on

ಮಳವಳ್ಳಿ: ವೈಕುಂಠ ಏಕಾದಶಿ ಪ್ರಯುಕ್ತ ಮಳವಳ್ಳಿ ಪಟ್ಟಣದ ಕೋಟೆ ಬೀದಿಯಲ್ಲಿರುವ ಪ್ರಸಿದ್ದ ಪುರಾತನ ದೇವಾಲಯವಾದ ಶಾಙ್ಗ ಪಾಣಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು.ಇಂದು ಬೆಳಿಗ್ಗಿನ ಜಾವ 4 ಗಂಟೆಗೆ ಭಕ್ತರು ದೇವರ ದರ್ಶನ ಪಡೆಯಲು ದೇವಸ್ಥಾನ ಮುಂದೆ ಕಾಯ್ದು ಕುಳಿತು ಕೊಂಡಿದ್ದರು. ಇನ್ನೂ ಕಳೆದ ವರ್ಷದಂತೆ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡದೆ ಸರಳವಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕೋವಿಡ್ 19 ಹಿನ್ನಲೆಯಲ್ಲಿ ಈ ಬಾರೀ ಉತ್ಸವ ಮೂರ್ತಿಯನ್ನು ಮೆರವಣಿಗೆ ನಡೆಸದೆ ಕೇವಲ ದೇವಸ್ಥಾನ ಒಳಗೆ ಉತ್ಸವ ಮೂರ್ತಿ ಇಟ್ಟು ಪೂಜೆ ಸಲ್ಲಿಸಲಾಯಿತು. ದರ್ಶನ ಪಡೆಯಲು ನೂರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದು, ಪ್ರಸಾದವಾಗಿ ಲಡ್ಡು ಅನ್ನು ಭಕ್ತರಿಗೆ ವಿತರಿಸಲಾಯಿತು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version