ಮಂಡ್ಯ

ಪಿಎಫ್ ಐ ಸಂಘಟನೆಯನ್ನು ನಿಷೇಧ ಮಾಡಬೇಕು- ಬಿಜೆಪಿ ಘಟಕದ ಅಧ್ಯಕ್ಷ ಎಂ.ಎನ್ ಕೃಷ್ಣ..!

Published

on

ಮಳವಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರವರ ಮಂಗಳೂರು ಕಚೇರಿ ಮೇಲೆ ಪಿ ಎಫ್ ಐ ಸಂಘಟನೆ ದಾಳಿಯನ್ನು ಖಂಡಿಸಿ ಮಳವಳ್ಳಿ ತಾಲ್ಲೂಕು ಬಿಜೆಪಿ ಘಟಕದಲ್ಲಿ ತಾಲ್ಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಜೊತೆಗೆ ಮಳವಳ್ಳಿ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಎಂ.ಎನ್ ಕೃಷ್ಣ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ತಹಸೀಲ್ದಾರ್ ಚಂದ್ರಮೌಳಿ ರವರಿಗೆ ಪಿಎಫ್ ಐ ಸಂಘಟನೆ ಯನ್ನು ನಿಷೇದ ಮಾಡಬೇಕು, ದೇಶ ದ್ರೋಹಿ ಚಟುವಟಿಕೆ, ಭಯೋತ್ಪಾದಕ ಚಟುವಟಿಕೆ ಗಳಲ್ಲಿ ಭಾಗವಹಿಸುತ್ತಿದೆ . ರಾಜ್ಯದಲ್ಲಿ ಇಂತಹ ಸಂಘಟನೆಯನ್ನು ನಿಷೇದ ಮಾಡಬೇಕೆಂದು ಒತ್ತಾಯಿಸಿದರು.ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾ ವಕ್ತಾರ ಚಿಕ್ಕಣ್ಣ, ಜಿಲ್ಲಾ ಪ್ರದಾನಕಾರ್ಯದರ್ಶಿ ಹೆಬ್ಬಣಿ ಬಸವರಾಜು,ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ದೇವರಾಜು, ತಾಲ್ಲೂಕು ಪ್ರದಾನ ಕಾರ್ಯದರ್ಶಿ ಕೆ.ಸಿ ನಾಗೇಗೌಡ, ಅಶೋಕಕ್ಯಾತನಹಳ್ಳಿ, ಕಾಂತರಾಜು ಸೇರಿದಂತೆ ಅನೇಕರು ಇದ್ದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version