ಚಿಕ್ಕಬಳ್ಳಾಪುರ

6181 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ..!

Published

on

ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯತಿಗಳ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಗ್ರಾಮ ಪಂಚಾಯತಿಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದಿದ್ದು, ಓಟ್ಟು 2443 ಸ್ಥಾನಗಳಿದ್ದು, ಇದರಲ್ಲಿ 113 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿ 2330 ಸ್ಥಾನಗಳಿಗೆ ಚುನಾವಣೆ ಎರಡು ಹಂತಗಳಲ್ಲಿ ನಡೆದಿತ್ತು. ಚುನಾವಣೆ ಕಣದಲ್ಲಿ 6181 ಅಭ್ಯರ್ಥಿಗಳಿದ್ದು ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ 23, ಬಾಗೇಪಲ್ಲಿ ತಾಲ್ಲೂಕಿನ 24 , ಶಿಡ್ಲಘಟ್ಟ ತಾಲ್ಲೂಕಿನ 24,ಚಿಂತಾಮಣಿ ತಾಲ್ಲೂಕಿನ 35, ಗೌರಿಬಿದನೂರು ತಾಲ್ಲೂಕಿನ 37 ಮತ್ತು ಗುಡಿಬಂಡೆ ತಾಲ್ಲೂಕಿನ 8 ಸೇರಿದಂತೆ ಒಟ್ಟು 152 ಗ್ರಾಮ ಪಂಚಾಯತಿಗಳು. ಆಯಾ ತಾಲ್ಲೂಕು ಕೇಂದ್ರಗಳಲ್ಲಿಯೇ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಿದ್ದು, ಮತ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ. ಇನ್ನೂ ಮತ ಎಣಿಕೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿರುವ ಜಿ,ಕೆ ಮಿಥುನ ಕುಮಾರ್ ಭೇಟಿ ಕೊಟ್ಟು ಪರಿಶೀಲನೆಯನ್ನು ನಡೆಸಿದ್ದಾರೆ.

ವರದಿ-ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Click to comment

Trending

Exit mobile version