ನಟ ಅನಿರುದ್ಧ್ ಮನೆಗೆ ಭೇಟಿ ನೀಡಿದ ಜಯನಗರದ ಶಾಸಕಿ ಸೌಮ್ಯ ರೆಡ್ಡಿ..!

ಬೆಂಗಳೂರು: ಜೊತೆ ಜೊತೆಯಲಿ’ಧಾರಾವಾಹಿ ಖ್ಯಾತಿಯ ನಟ ಅನಿರುದ್ಧ್ ಅವರು ಪ್ರಸ್ತುತ ನಟನೆಯ ಜೊತೆಗೆ ಸಾಮಾಜಿಕ ಕೆಲಸಗಳಿಗೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಖಾತೆ ಮೂಲಕ ಅವರು ಅನೇಕ ಸಮಸ್ಯೆಗಳು, ಅವುಗಳಿಗೆ ಪರಿಹಾರವನ್ನು ಸೂಚಿಸಿ ಸರ್ಕಾರದ ಜೊತೆಗೆ ಜನರ ಗಮನ ಸೆಳೆಯುತ್ತಿದ್ದಾರೆ. ಅವರ ಮನೆಗೆ ಜಯನಗರದ ಶಾಸಕಿ ಸೌಮ್ಯ ರೆಡ್ಡಿ ಭೇಟಿ ನೀಡಿದ್ದು, ಆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಿಗೆ ಕಳಕಳಿಯ ಮನವಿ. ನಮ್ಮ ರಾಜ್ಯದಲ್ಲಿ ತೆರೆದ ಕಾಲುವೆಗಳನ್ನು ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಪಕ್ತಿ ಉತ್ಪಾದನೆಗೆ ಸೌರಫಲಕಗಳನ್ನು ಬಳಸಬಹುದು. ಎರಡೂ ಬದಿಯಲ್ಲಿ ಗೋಡೆಗಳನ್ನು ಕಟ್ಟಿ ಅವುಗಳ ಮೇಲೆ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು’ಎಂದು ಅನಿರುದ್ಧ ಅವರು ಹೊಸದಾಗಿ ಅಧಿಕೃತವಾದ ಟ್ವಿಟ್ಟರ್ ಖಾತೆ ತೆರದು ಟ್ವೀಟ್ ಮಾಡಿದ್ದಾರೆ.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment