ಚಿಕ್ಕಬಳ್ಳಾಪುರ

ಹಕ್ಕಿ ಜ್ವರ ವದಂತಿ, ಆಂತಕ ಬೇಡ-ಡಿ.ಸಿ ಆರ್ ಲತಾ..!

Published

on

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರು ಹಕ್ಕಿ ಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಈವರೆಗೆ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಬಗ್ಗೆ ವರದಿಯಾಗಿಲ್ಲ. ಈಗಾಗಲೇ ಮುಂಜಾಗ್ರತೆ ವಹಿಸಿಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್ ಲತಾ ಸ್ಪಷ್ಟಪಡಿಸಿದ್ದಾರೆ. ಚಿಕ್ಕಬಳ್ಳಾಪುರ ನಗರ ಹೊರವಲಯದ ಅಮಾನಿ ಗೋಪಾಲಕೃಷ್ಣ ಕೆರೆಯಲ್ಲಿ ಗುರುವಾರ ಎರಡು ವಲಸೆ ಪಕ್ಷಿಗಳು ಮೃತಪಟ್ಟಿದ್ದು, ಮೃತಪಟ್ಟ ಹಕ್ಕಿಗಳನ್ನು ಬೆಂಗಳೂರಿನಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕಾ ಸಂಶೋಧನಾ ಸಂಸ್ಥೆಯ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ. 25 ದಿನಗಳ ಹಿಂದೆ ಇದೇ ಅಮಾನಿ ಗೋಪಾಲ ಕೃಷ್ಣ ಕೆರೆಯಲ್ಲಿ ಮೃತಪಟ್ಟಿದ್ದ ಎರಡು ಹಕ್ಕಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ಪ್ರಕಾರ ಈ ಎರಡು ಹಕ್ಕಿಗಳು ಯಾವುದೇ ಸೋಂಕಿನಿಂದ ಮೃತಪಟ್ಟಿರುವುದಿಲ್ಲ ಎಂದು ದೃಢಪಟ್ಟಿದೆ. ಹಾಗಾಗಿ, ಜಿಲ್ಲೆಯ ನಾಗರಿಕರು ಹಕ್ಕಿ ಜ್ವರದ ಬಗ್ಗೆ ಹೆದರಬೇಕಾಗಿಲ್ಲ. ಈಗಾಗಲೇ ಜಿಲ್ಲೆಯ ಎಲ್ಲಾ ಕಡೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ. ನಾಗರಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಆರ್ ಲತಾ ಮನವಿ ಮಾಡಿದರು.

ವರದಿ- ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Click to comment

Trending

Exit mobile version