ಕೋಲಾರ

ಕುರುಬ ಸಮುದಾಯ ಮೀಸಲಾತಿ ಹೋರಾಟ ಪೂರ್ವಭಾವಿ ಸಭೆ..!

Published

on

ಕೋಲಾರ: ಎಸ್.ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಕರ್ನಾಟಕ ರಾಜ್ಯದಲ್ಲಿರುವ ಕುರುಬ ಸಮುದಾಯವನ್ನು ಎಸ್.ಟಿ ಮೀಸಲಾತಿಗೆ ಸೇರಿಸಬೇಕೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಫೆಬ್ರವರಿ 7 ರಂದು ಬೃಹತ್ ಹೋರಾಟ ಸಭೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕುರುಬರ ಎಸ್.ಟಿ ಮೀಸಲಾತಿ ಹೋರಾಟ ಸಮಿತಿ ಮುಖಂಡ ದೇವರಾಜ್ ಹೇಳಿದ್ದಾರೆ. ಕೋಲಾರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಸ್.ಟಿ ಹೋರಾಟ ಸಮಿತಿ ಮುಖಂಡರು ಬೆಂಗಳೂರಿನ ಬೃಹತ್ ಹೋರಾಟ ಸಭೆ ಅಂಗವಾಗಿ ಕೋಲಾರದಲ್ಲಿ ಜ.12 ರಂದು ಕೆ.ಇ.ಬಿ ಸಮುದಾಯ ಭವನದಲ್ಲಿ ಪೂರ್ವ ಭಾವಿ ಸಭೆಯನ್ನು ಹಮ್ಮಿಕೊಂಡಿದ್ದು, ಈ ಸಭೆಗೆ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಪೀಠಾಧಿಪತಿಗಳು, ಸ್ವಾಮೀಜಿಗಳು,ಸಚಿವರಾದ ಕೆ.ಎಸ್ ಈಶ್ವರಪ್ಪ,ವಿಧಾನಪರಿಷತ್ ಸದಸ್ಯರಾದ ಎಂಟಿ ನಾಗರಾಜ್ ಸೇರಿದಂತೆ ರಾಜ್ಯ ಮಟ್ಟದ ಸಮುದಾಯದ ಮುಖಂಡರು ಭಾಗಿಯಾಗಿ ಎಸ್.ಟಿ ಮೀಸಲಾತಿ ಹೋರಾಟದ ಬಗ್ಗೆ ಮಾರ್ಗದರ್ಶನ ನೀಡಲ್ಲಿದ್ದಾರೆ. ಎಸ್.ಟಿ ಮೀಸಲಾತಿಯಿಂದ ಶೈಕ್ಷಣಿಕವಾಗಿ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆವಿಗೂ ಸೌಲಭ್ಯಗಳು ದೊರೆಯುತ್ತದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲಾ ಇಲಾಖೆಗಳಲ್ಲಿ ಉದ್ಯೋಗ ಮೀಸಲಾತಿ ಹಾಗೂ ಕೃಷಿಕ್ಷೇತ್ರದಲ್ಲಿ ಹೆಚ್ಚಿನ ಸೌಲಭ್ಯಗಳು, ರಾಜಕೀಯ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶ ಸಿಕ್ಕಿ ರಾಜ್ಯದಲ್ಲಿ ಹಿಂದುಳಿದಿರುವ ಕುರುಬ ಸಮುದಾಯ ಮುಖ್ಯವಾಹಿನಿಗೆ ಬರುಬೇಕು ಎಂಬುದೇ ನಮ್ಮ ಮೀಸಲಾತಿ ಹೋರಾಟದ ಆಶಯವಾಗಿದೆ, ಕುರುಬ ಸಮುದಾಯವನ್ನು ಎಸ್.ಟಿ ಮೀಸಲಾತಿಗೆ ಸೇರಿಸಲು ಬೇಕಾದ ದಾಖಲೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಎಸ್.ಟಿ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಸಾಗರ್ ಹೇಳಿದ್ರು. ಅಂದು ಪೂರ್ವಭಾವಿ ಸಭೆಗೆ ಜಿಲ್ಲೆಯ ಕುರುಬ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೀಸಲಾತಿ ಹೋರಾಟವನ್ನು ಯಶ್ವಸಿಗೊಳಿಸಬೇಕಾಗಿ ಮುಖಂಡರು ಮನವಿ ಮಾಡಿದರು.

ವರದಿ- ಬೆಟ್ಟಪ್ಪ ಎಕ್ಸ್ ಪ್ರೆಸ್ ಟಿವಿ ಕೋಲಾರ

Click to comment

Trending

Exit mobile version