ಲಿಂಗಸೂಗೂರು

ರಸ್ತೆ ಕಾಮಗಾರಿ ಮಾಡದ ಶಾಸಕರಿಗೆ ಕರವೇಯಿಂದ ಧಿಕ್ಕಾರ..!

Published

on

ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಮೂಲಕ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ರಸ್ತೆ ಕಾಮಗಾರಿಗೆ ಟೆಂಡರ್ ಕರೆಯದೆ ಸುಳ್ಳು ಭರವಸೆ ನೀಡುತ್ತಿರುವ ಲಿಂಗಸುಗೂರು ಶಾಸಕ ಡಿ.ಎಸ್ ಹೂಲಗೇರಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಯಚೂರು ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚಾರ ಮಾಡಲು ಹರಸಾಹಸ ಪಡುವಂತಾಗಿದೆ. ರಸ್ತೆಯ ಎಡಕ್ಕೆ ಬಲಕ್ಕೆ 50-50 ಅಡಿಯಲ್ಲಿ ಬರುವ ಕಟ್ಟಡಗಳನ್ನು ನೆಲಸಮಗೊಳಿಸಿ 10 ವರ್ಷ ಕಳೆದಿವೆ. ಇದರಿಂದ ಪ್ರತಿದಿನ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಆದಷ್ಟು ಬೇಗ ಈ ರಸ್ತೆ ಕಾಮಗಾರಿಗೆ ಟೆಂಡರ್ ಕೆರೆದು ಕೆಲಸ ಪ್ರಾರಂಭ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್ ಎ ನಯೀಮ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ ಮುದಗಲ್ ಉಪತಹಶೀಲ್ದಾರರ ಮೂಲಕ ರಾಯಚೂರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ವರದಿ- ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು.

Click to comment

Trending

Exit mobile version