ಲಿಂಗಸುಗೂರು ಕೆನರಾ ಬ್ಯಾಂಕ್ ಸೀಲ್‌ಡೌನ್..

ಲಿಂಗಸೂಗೂರು(ರಾಯಚೂರು):ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕೋವಿಡ್-೧೯ ಪ್ರಕರಣ ವರದಿಯಾದ ಬಳಿಕ ಕೆನರಾ ಬ್ಯಾಂಕ್‌ನ ಸೀಲ್‌ಡೌನ್ ಮಾಡಲಾಗಿದ್ದು,ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಲಾಗಿದೆ. ಕೇರಳ ಮೂಲದ ವ್ಯಕ್ತಿ ನಿರಂತರವಾಗಿ ಲಿಂಗಸುಗೂರು ಕೆನರಾ ಬ್ಯಾಂಕ್‌ನಲ್ಲಿ ವ್ಯವಹಾರ ಮಾಡಿದ್ದಾರೆ.ಅಲ್ಲದೇ ಇವರ ಪ್ರಾಥಮಿಕ ಸಂಪರ್ಕವನ್ನು ಬ್ಯಾಂಕ್ ಸಿಬ್ಬಂದಿ ಹೊಂದಿದ್ದು, ಪರಿಣಾಮ ನಾಲ್ಕು ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಿ, ಬ್ಯಾಂಕ್‌ನ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಇನ್ನು ಕೇರಳ ಸೋಂಕಿತ ಮತ್ತು ಸರ್ಜಾಪುರ ಯುವಕ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಹೀಗಾಗಿ ಇವರಿಗೆ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯನ್ನೂ ಕ್ವಾರಂಟೈನ್ ಮಾಡಿ ಸಾರ್ವಜನಿಕ ಆಸ್ಪತ್ರೆಯ ಹೊರ ರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಲಾಗಿದೆ. ಇದೇ ವೇಳೆ ಸಾರ್ವಜನಿಕ ಆಸ್ಪತ್ರೆಗೆ ನಿತ್ಯ ೪೦೦ ರಿಂದ ೫೦೦ ಹೊರ ರೋಗಿಗಳು ಬರುತ್ತಿದ್ದರು. ಇದೀಗ ತುರ್ತು ಚಿಕಿತ್ಸೆ ಹೊರತು ಪಡಿಸಿ ಉಳಿದ ಸೇವೆ ಸ್ಥಗಿತಗೊಳಿಸಿದ್ದಾರೆ. ಬ್ಯಾಂಕ್ ಸಿಬ್ಬಂದಿಯನ್ನು…

Read More

ಧಾರವಾಡದಲ್ಲಿ ಎರಡು ಕೊರೊನಾ ಕೇಸ್

ಧಾರವಾಡ : ಧಾರವಾಡದ ಜಿಲ್ಲೆಯಲ್ಲಿಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಪಿ-೩೪೩೬(೪೮ ವರ್ಷ,ಪುರುಷ) ಹಾಗೂ ಪಿ-೩೪೩೭ (೬೬ ವರ್ಷ,ಮಹಿಳೆ)ಈ ಇಬ್ಬರೂ ರಾಜಸ್ಥಾನ ರಾಜ್ಯದ ಅಜ್ಮೀರ್‌ನಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.ಸಾAಸ್ಥಿಕ ಕ್ವಾರಂಟೈನ್‌ನಲ್ಲಿದ್ದರು ಎಂದು ತಿಳಿಸಿದ್ದಾರೆ. ಇನ್ನು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ೫೦ಕ್ಕೆ ಏರಿಕೆಯಾಗಿದೆ.ಈಗಾಗಲೇ ೨೬ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Read More

ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯ..

ಶಿರಾ(ತುಮಕೂರು): ಜಿಲ್ಲೆಯ ಶಿರಾ ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸಾಲದ ಮೊತ್ತ ಜಮಾ ಮಾಡಿರುವ ಆದೇಶ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಅಂದ ಹಾಗೇ ಕಾರ್ಯಕ್ರಮದಲ್ಲಿ ಬ್ಯಾಂಕ್‌ನ ನಿರ್ದೇಶಕ ಜಿ.ಎಸ್.ರವಿ ಬೀದಿ ಬದಿ ವ್ಯಾಪಾರಿಗಳಿಗೆ ನೇರವಾಗಿ ಅವರ ಶೂನ್ಯ ಉಳಿತಾಯ ಖಾತೆಗೆ ಸಾಲದ ಮೊತ್ತ ಜಮಾ ಮಾಡಿರುವ ಆದೇಶ ಪತ್ರಗಳನ್ನು ವಿತರಿಸಿದರು. ಬಳಿಕ ಮಾತನಾಡಿದ ಅವರು,ಲಾಕ್‌ಡೌನ್‌ನಿಂದ ಬೀದಿ ಬದಿ ವ್ಯಾಪಾರಸ್ಥರು ಆರ್ಥಿಕ ಮುಗ್ಗಟ್ಟಿನಿಂದ ಕಷ್ಟಪಡುತ್ತಿದ್ದಾರೆ.ಜೀವನೋಪಾಯಕ್ಕೆ ಅನ್ಯ ಮಾರ್ಗವಿಲ್ಲದೆ ಖಾಸಗಿ ಲೇವಾದೇವಿ ಸಂಸ್ಥೆಯ ಶೋಷಣೆಗೆ ಒಳಗಾಗುತ್ತಿರುವುದನ್ನು ಅರಿತು ಬ್ಯಾಂಕ್ ಆಡಳಿತ ಮಂಡಳಿ ಈ ವ್ಯಾಪಾರಸ್ಥರಿಗೆ ಸಾಲ ನೀಡಲು ತೀರ್ಮಾನ ಕೈಗೊಂಡಿದೆ ಎಂದರು. ಯಾವುದೇ ರೀತಿಯ ಆಧಾರ ಇಲ್ಲದೇ ಬಡವರ ಬಂಧು ಯೋಜನೆಯಡಿ ಸಾಲ ನೀಡಲಾಗುವುದು.ಜಿಲ್ಲೆಯ ೧೦ತಾಲ್ಲೂಕುಗಳನಿರ್ದೇಶಕರು ತಮ್ಮ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ತಾವುಗಳೇ ಸಾಲದ ಚೆಕ್ ವಿತರಿಸಬಹುದು.ಇದಕ್ಕೆ ಅಧ್ಯಕ್ಷರನ್ನು ಕಾಯುವ ಅಗತ್ಯವಿಲ್ಲ ಎಂದು ಹೇಳಿದರು. ಈ ವೇಳೆ…

Read More

ಕೆಲವರ ವೈಯಕ್ತಿಕ ಚಟಕ್ಕೆ ಮಂಡ್ಯದ ಮೈಶುಗರ್ ಬಲಿ..

ನಾಗಮಂಗಲ(ಮ0ಡ್ಯ): ಜಿಲ್ಲೆಯ ಕಬ್ಬು ಬೆಳೆಗಾರರ ಆಶಾಕಿರಣವಾಗಿದ್ದ ಮೈಶುಗರ್ ಸಕ್ಕರೆ ಕಾರ್ಖಾನೆಯ ಪುನರಾರಂಭದ ವಿಷಯ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆಯುತ್ತಿರುವ ಬೆನ್ನಲ್ಲೆ ಸರ್ಕಾರಿ ಅಥವ ಖಾಸಗೀಕರಣ ಎಂಬ ಜಿಜ್ಞಾಸೆಯಲ್ಲಿರುವ ರೈತಾಪಿ ವರ್ಗಕ್ಕೆ ಹಾಲಿ-ಮಾಜಿ ಜನಪ್ರತಿನಿಧಿಗಳ ಹೇಳಿಕೆಗೆ ತಲೆನೋವಾಗಿ ಪರಿಣಮಿಸುತ್ತಿದೆ. ನಾಗಮಂಗಲ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ ಜಿಲ್ಲೆಯ ಕೆಲ ಜನಪ್ರತಿನಿಧಿಗಳ ವೈಯಕ್ತಿಕ ಚಟದಿಂದ ಮೈಶುಗರ್ ಬಲಿಯಾಗಿದೆ.ಸದ್ಯ ಕಾರ್ಖಾನೆ ಆರಂಭಕ್ಕೆ ಅಡ್ಡಿಪಡಿಸುವ ಮೂಲಕ ಇವರು ಕಂಟಕವಾಗಿರುವುದು ಜಿಲ್ಲೆಯ ರೈತರಿಗೆ ಮಾಡುತ್ತಿರುವ ದ್ರೋಹ ಎಂದು ಜಿಲ್ಲೆಯ ಜೆಡಿಎಸ್ ಶಾಸಕರ ವಿರುದ್ದ ಪರೋಕ್ಷವಾಗಿ ಕಿಡಿಕಾರಿದ್ದಾರೆ. ಇನ್ನು ಜಿಲ್ಲೆಯ ಕೆಲವರು ಏನಾದರೂ ಮಾಡಿ ಕಾರ್ಖಾನೆ ಆರಂಭವಾಗದAತೆ ಸಂಚು ರೂಪಿಸಿಕೊಂಡಿದ್ದಾರೆ.ಆದರೆ ಅದು ಅವರಿಗೆ ಗೌರವವಲ್ಲ.ನಾವು ಆರಂಭ ಮಾಡಲು ಸಾಧ್ಯವಾಗದಿದ್ದರೂ ಪರವಾಗಿಲ್ಲ,ಬೇರೆಯವರು ಆರಂಭ ಮಾಡುತ್ತಿದ್ದಾರಲ್ಲ ಎಂಬುದು ಜನಪ್ರತಿನಿಧಿಗಳಾದವರ ಉದ್ದೇಶವಾಗಿರಬೇಕು.ಆದರೆ ಅದು ನಮ್ಮ ಜಿಲ್ಲೆಯ ಜನಪ್ರತಿನಿಧಿಗಳಲ್ಲಿ ಕಂಡುಬರುತ್ತಿಲ್ಲ. ಜೊತೆಗೆ…

Read More

ರಾಜ್ಯದಲ್ಲಿ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ಯಶ್ವಸಿಯಾದ ಪ್ಲಾಸ್ಮಾ ಥೆರಪಿ ಚಿಕಿತ್ಸೆ..

ಹುಬ್ಬಳ್ಳಿ : ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಿಮ್ಸ್ ಮತ್ತೊಂದು ಸಾಧನೆ ಮಾಡಿದೆ.ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದ ಕಿಮ್ಸ್ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಕೊವೀಡ್ ಸೊಂಕಿತರನ್ನು ಗುಣಮುಖರನ್ನಾಗಿ ಮಾಡಲು ಪಾಸ್ಮಾ ಥೆರಪಿ ಚಿಕಿತ್ಸೆ ಪ್ರಯೋಗ ಮಾಡಲಾಗಿತ್ತು.ಆದರೆ ಹಲವೆಡೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ವಿಫಲವಾದ ನಂತರ ಇದೀಗ ರಾಜ್ಯದಲ್ಲಿ ಮೊದಲ ಭಾರಿಗೆ ಹುಬ್ಬಳ್ಳಿಯಲ್ಲಿ ಪಾಸ್ಮಾ ಥೆರಪಿ ಚಿಕಿತ್ಸೆ ಯಶ್ವಸಿಯಾಗಿದೆ. ಹುಬ್ಬಳ್ಳಿಯ ಕೋವಿಡ ಸೊಂಕಿತ ಪಿ-೩೬೩ರಿಂದ ಪ್ಲಾಸ್ಮಾ ಡೋನೇಟ್ ಪಡೆದು ಮುಂಬೈನಿAದ ರಾಜ್ಯಕ್ಕೆ ವಾಪಸ್ ಆಗಿದ್ದ ಪಿ-೨೭೧೦ಗೆ ಪ್ಲಾಸ್ಮಾ ಥೆರಪಿ ಮಾಡಿ ವೈದ್ಯರ ತಂಡ ಯಶಸ್ಸು ಸಾಧಿಸಿದೆ.ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಈ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಿಮ್ಸ್ನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ನೀಡಲು ಐಸಿಎಂಆರ್ ನಿಂದ ಅನುಮತಿ ನೀಡಿದ್ದು,ರಾಜ್ಯದಲ್ಲಿ ಹುಬ್ಬಳ್ಳಿಯ ವೈದ್ಯಕೀಯ ಶಿಕ್ಷಣ…

Read More

ಬಾದಾಮಿಯತ್ತ ಮುಖ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ..

ಬಾಗಲಕೋಟೆ: ನಾಳೆ ಹಾಗೂ ನಾಡಿದ್ದು ಎರಡು ದಿನಗಳ ಕಾಲ ವಿಪಕ್ಷ ನಾಯಕ ಹಾಗೂ ಶಾಸಕ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಸ್ವಕ್ಷೇತ್ರ ಬಾದಾಮಿ ಪ್ರವಾಸ ಕೈಗೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂದು ಅವರ ಆಪ್ತ ವಲಯ ತಿಳಿಸಿದೆ. ಅಂದ ಹಾಗೇ ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಬಾದಾಮಿ ಕ್ಷೇತ್ರ ರಾಜಕೀಯ ಪುರ್ನಜನ್ಮ ನೀಡಿತ್ತು.ಆದರೆ,ಅವರು ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಇಲ್ಲಿನ ರೈತರ, ಬಡ ಕೂಲಿ ಕಾರ್ಮಿಕರ ಮತ್ತು ನೆರೆ ಸಂತ್ರಸ್ತರ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸಿರಲಿಲ್ಲ. ಅಲ್ಲದೆ,ಕೊರೊನಾ ಎಫೆಕ್ಟ್ ಹಿನ್ನೆಲೆಯಲ್ಲಿ ಮೂರು ತಿಂಗಳಾದರೂ ಸ್ವಕ್ಷೇತ್ರಕ್ಕೆ ಆಗಮಿಸಿರಲಿಲ್ಲ.ಹೀಗಾಗಿ ಜೂ.೩ ಹಾಗೂ ೪ ರಂದು ಬಾಗಲಕೋಟೆ ಜಿಲ್ಲೆಯ ಸ್ವಕ್ಷೇತ್ರ ಬಾದಾಮಿ ಪ್ರವಾಸ ಕೈಗೊಳ್ಳಲಿದ್ದಾರೆ. ಇದಲ್ಲದೆ, ಸಿದ್ದರಾಮಯ್ಯ ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಜನರ ಸಮಸ್ಯೆಗೆ ಖುದ್ದಾಗಿ ಸ್ಪಂದಿಸಿರಲಿಲ್ಲ.ಬದಲಿಗೆ ಇಲ್ಲಿನ ರೈತರ, ಬಡ ಕೂಲಿ ಕಾರ್ಮಿಕರ ಮತ್ತು ನೆರೆ ಸಂತ್ರಸ್ತರಿಗೆ ತಮ್ಮ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರ ಮೂಲಕ…

Read More

ಸ್ವಂತ ಖರ್ಚಿನಲ್ಲಿ ಆಹಾರ ಕಿಟ್ ನೀಡಿದ ಹುಬ್ಬಳ್ಳಿ ಇಂಜನಿಯರ್..

ಹುಬ್ಬಳ್ಳಿ: ಲಾಕ್ ಡೌನ್ ಸಂದರ್ಭದಲ್ಲಿ ನಿರ್ಗತಿಕರು ಹಾಗೂ ಬಡವರಿಗೆ ಅನಕೂಲವಾಗಲಿ ಎಂದು ಜಿಲ್ಲಾಡಳಿತದ ಮುಖಾಂತರ ಹುಬ್ಬಳ್ಳಿಯ ಇಂಜನಿಯರ್ ಸಂಜೀವ್ ಜೋಶಿ ತಮ್ಮ ಸ್ವಂತ ಖರ್ಚಿನಲ್ಲಿ ೨೫ಕ್ಕೂ ಹೆಚ್ಚು ಆಹಾರ ಕಿಟ್ ವಿತರಣೆ ಮಾಡಿದರು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವನ್ನೇ ಲಾಕ್ ಡೌನ್ ಮಾಡಲಾಗಿತ್ತು.ಹೀಗಾಗಿ ಹಲವಾರು ವರ್ಗದ ಜನರು ಸಂಕಷ್ಟ ಸಿಲುಕಿದ್ದು,ಅವರಿಗೆ ಅನೂಕೂಲವಾಗಲಿ ಎಂದು ಅಕ್ಕಿ,ಎಣ್ಣೆ,ಸಕ್ಕರೆ ಹಾಗೂ ದಿನ ನಿತ್ಯ ಉಪಯೋಗಿಸುವ ದಿನಸಿ ವಸ್ತುಗಳನ್ನು ತಹಶೀಲ್ದಾರ್ ಮುಖಾಂತರ ಜಿಲ್ಲಾಡಳಿತಕ್ಕೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಶಶಿಧರ್ ಮಾಡ್ಯಾಳ, ಎಫ್‌ಡಿಸಿ ಹುಕ್ಕೇರಿ,ಮಕಾನದಾರ,ಸಂಜೀವ್ ಜೋಶಿ ಹಾಗೂ ಇನ್ನಿತರರು ಹಾಜರಿದ್ದರು. ರಾಜು ಮುದ್ಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Read More

ಕೊರೊನಾಗಿಂತ ಮೊದಲೇ ಬೇರೆ ರೋಗದಿಂದ ನಾವ್ ಸಾಯೋದು ಗ್ಯಾರಂಟಿ..!

ತಿಪಟೂರು(ತುಮಕೂರು): ಕೊರೊನಾ ರೋಗದ ಹಾವಳಿಯಿಂದ ಅಂತರ ಜಿಲ್ಲೆ ಅಂತರರಾಜ್ಯದಿAದ ಬಂದAತಹ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಇಲ್ಲಿ ಸಮರ್ಪಕ ಆಹಾರ, ನೀರು ಮತ್ತು ಇತರೆ ಮೂಲಭೂತ ಸೌಕರ್ಯಗಳ ಕೊರತೆ ಇದ್ದು ನಾವು ಇನ್ನೂ ಇಲ್ಲಿಯೇ ಇದ್ದರೆ ಇನ್ನಿತರೆ ಕಾಯಿಲೆಗಳೂ ಬರುವ ಸಾಧ್ಯತೆ ಹೆಚ್ಚಾಗಿದೆ ಎಂದು ನಗರದ ಬಲಿಜ ಸಮಾಜದ ವಿದ್ಯಾರ್ಥಿನಿಲಯದಲ್ಲಿ ಕ್ಯಾರಂಟೈನ್‌ಗಳು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಇAದು ಬೆಳಗ್ಗೆ ಕೊಟ್ಟ ಚಿತ್ರಾನ್ನದಲ್ಲಿ ಅಕ್ಕಿಯೂ ಬೆಂದೇ ಇರಲಿಲ್ಲ, ಇನ್ನು ಇವರು ಕೊಡುವ ಚಪಾತಿ ಅರ್ಧಬೆಂದಿದ್ದರೆ ಉಳಿದ್ದು ಬೆಂದೇ ಇರುವುದಿಲ್ಲ ನಿಷೇದಿತ ಪ್ಲಾಸ್ಟಿಕ್ ಬಳಸಿದರೆ ರಸ್ತೆಬದಿಯ ಬಡವರ ಹೋಟೆಲ್‌ಗಳಿಗೆ ದಂಡ ವಿಧಿಸುವ ಪ್ರಾಮಾಣಿಕ ಅಧಿಕಾರಿಗಳು ಇಂದೇಕೆ ಕಳಪೆಗುಣಮಟ್ಟದ ಪ್ಲಾಸ್ಟಿಕ್‌ನಿಂದ ಪೊಟ್ಟಣ ಕಟ್ಟಿರುವ ಆಹಾರ ತಂದು ನೀಡುತ್ತಾರೆಂದು ಪ್ರಶ್ನಿಸಿದ್ದಾರೆ. ಅಲ್ಲದೆ,ಇಲ್ಲಿನ ಕ್ವಾರಂಟೈನ್ ಕೇಂದ್ರದಲ್ಲಿ ಸೂಕ್ತವಾದ ಕುಡಿಯುವ ನೀರು, ಶೌಚಾಲಯವಿಲ್ಲ ಇನ್ನೂ ಶೌಚಾಲಯಗಳನ್ನು ಸ್ವಚ್ಚಮಾಡಿ ಎಷ್ಟೋ ದಿನಗಳು ಕಳೆದಿದ್ದರೂ ಅಧಿಕಾರಿಗಳು ಮಾತ್ರ…

Read More

ಕುಡಿಯಲು ನೀರಿಲ್ಲದೇ ಹಾಹಾಕಾರ.. ತೆರೆಯದ ಗ್ರಾಮ ಪಂಚಾಯತ್ ಕಛೇರಿ..

ಇಂಡಿ(ವಿಜಯಪುರ): ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಂಗೋಗಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ ಎದುರಾಗಿದೆ. ಸದ್ಯ ಇದರ ಬಗ್ಗೆ ಇಲ್ಲಿನ ಗ್ರಾಮಸ್ಥರು ಸುಮಾರು ೧ ತಿಂಗಳಿನಿAದ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.ಬದಲಿಗೆ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ಅಂದ ಹಾಗೇ ಸಂಗೋಗಿ ಗ್ರಾಮದ ನಿವಾಸಿ ಸುನೀಲ ವಾಲಿಕಾರ ಮಾತನಾಡಿ, ನಮ್ಮ ಗೋಳು ಕೇಳುವರಾರು?,ಜನರ ಸಮಸ್ಯೆ ಆಲಿಸಬೇಕಿದ್ದ ಗ್ರಾಮ ಪಂಚಾಯತ್ ಸದಸ್ಯರು ಸರ್ಕಾರದ ಆದೇಶ ಬರುವ ಮುಂಚೆಯೇ ಅಧಿಕಾರ ಮುಗಿದಂತೆ ವರ್ತಿಸುತ್ತಿದ್ದಾರೆ. ಜೊತೆಗೆ ನೀರಿನ ಸಮರ್ಪಕ ನಿರ್ವಹಣೆ ಮಾಡಬೇಕಿದ್ದ ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರಿಯಾದ ಸಮಯಕ್ಕೆ ಬಾರದೇ ಅಸಡ್ಡೆತನ ಪ್ರದರ್ಶನ ತೋರಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇನ್ನೂ ಹಲವಾರು ಕೆಲಸ ಕಾರ್ಯಗಳಿಗೆ ಬರುವ ಗ್ರಾಮಸ್ಥರು ಬಾಗಿಲು ಮುಚ್ಚಿದ ಗ್ರಾಮ ಪಂಚಾಯತ್ ಕಚೇರಿ ನೋಡಿಕೊಂಡು ಹಿಂದಿರುಗಬೇಕಾದ ಪರಿಸ್ಥಿತಿ ಎದುರಾಗಿದೆ. ಒಟ್ನಲ್ಲಿ ಸಂಗೋಗಿ ಗ್ರಾಮದಲ್ಲಿ ನೀರಿಗೆ ಹಾಹಾಕಾರವನ್ನು ಕೂಡಲೇ…

Read More

ಮಾನವಿ ಪೊಲೀಸ್ ಠಾಣೆಯಲ್ಲಿ ಕೊರೊನಾ ಜಾಗೃತಿ ಕೇಂದ್ರ…

ಮಾನವಿ(ರಾಯಚೂರು): ಮಾನವಿ ಪೊಲೀಸ್ ಠಾಣೆಯಲ್ಲಿ ಕೊರೊನಾ ಸೋಂಕನ್ನು ತಡೆಗಟ್ಟುವ ಹಾಗೂ ಪೊಲೀಸ್ ಠಾಣೆಗೆ ಬರುವ ಜನರಿಗೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಮತ್ತು ಸಾನಿಟೈಸರ್‌ನ್ನು ಬಳಸುವ ಸಲುವಾಗಿ ಸುಮಾರು ನೂರು ಮೀಟರ್ ಅಂತರದಲ್ಲಿ ತಪಾಸಣಾ ಕೇಂದ್ರ ಆರಂಭಿಸಲಾಗಿದೆ. ಅAದ ಹಾಗೇ ಜನರು ನೇರವಾಗಿ ಪೊಲೀಸ್ ಠಾಣೆಯ ಒಳಗೆ ಹೋಗುವುದನ್ನು ತಡೆಯಲಾಗುತ್ತೆ.ಮೊದಲು ಇಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಉಪಯೋಗಿಸಿಕೊಳ್ಳಬೇಕು.ನಂತರ ಅವರ ಅಹವಾಲುಳಗಳನ್ನು ವಿಚಾರಿಸಿಲಾಗುತ್ತದೆ.ಠಾಣೆಯ ಒಳಗೆ ಹೋಗುವ ಅವಶ್ಯಕತೆ ಇದ್ದರೆ ಮಾತ್ರ ಅವರಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಆ ನಂತರದಲ್ಲಿ ಠಾಣೆಯ ಒಳಗೆ ಹೋಗಲು ಅನುಕೂಲ ಮಾಡಿಕೊಡಲಾಗುತ್ತದೆ.ಇದೇ ರೀತಿಯಲ್ಲಿ ಜಿಲ್ಲೆಯ ಎಲ್ಲಾ ಠಾಣೆಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಕೊರೊನಾ ಸೋಂಕು ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಿ ಸಾರ್ವಜನಿಕ ಸ್ಥಳದಲ್ಲಿ ಹಾಗೂ ಪೊಲೀಸ್ ಠಾಣೆಗಳಿಗೆ ಬರುವ ಸಮಯದಲ್ಲಿ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕಾಗಿದೆ. ಸುಲ್ತಾನ್ ಬಾಬ ಎಕ್ಸ್ ಪ್ರೆಸ್ ಟಿವಿ…

Read More