ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.ಮೊದಲ ಘಟನೆಯಲ್ಲಿ ಮೃತರನ್ನು ಚೆನ್ನಾಪುರಿ ಮತ್ತು ವೀರಣ್ಣ ಎಂದು ಗುರುತಿಸಲಾಗಿದ್ದು, ಹೊಲಗಳಲ್ಲಿ ದನ ಮೇಯಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮತ್ತೊಂದು ಘಟನೆಯಲ್ಲಿ, ಹರವಡಹಳ್ಳಿಯ ಜರ್ಮಹಳ್ಳಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜಶೇಖರ್ ತಮ್ಮ ಕೃಷಿ ಜಮೀನಿನಿಂದ ಹಿಂದಿರುಗುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದು, ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ. ಮೂರನೇ ಘಟನೆಯಲ್ಲಿ, ಅಯ್ಯನಹಳ್ಳಿ ಗ್ರಾಮದ ಪತ್ರೆಪ್ಪ ತನ್ನ ಕಿರಾಣಿ ಅಂಗಡಿ ಬಾಗಿಲು ಮುಚ್ಚುತ್ತಿದ್ದಾಗ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. ತಹಶೀಲ್ದಾರ್ ಮಹಾಬಲೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Read MoreCategory: ಬೆಂಗಳೂರು
“ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಇಲ್ಲೇ ಬಳಕೆಯಾಗ್ಬೇಕು”
ಆಕ್ಸಿಜನ್ ಸರಬರಾಜು ಬಗ್ಗೆ ಸಭೆ ನಡೆಸಿದ್ದೇವೆ. ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು. ಹಲವು ಸೂಚನೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ನಮ್ಮಲ್ಲೇ ಬಳಕೆ ಆಗುವಂತೆ ಆಗಬೇಕು. ಈ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಘೋಯಲ್ ಜೊತೆ ಮಾತುಕತೆ ಮಾಡಿದ್ದೇನೆ ಎಂದಿದ್ದಾರೆ.
Read Moreತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ
ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ ಆಮ್ಲಜನಕ ಕೊರತೆಯಿಂದ ಇನ್ನು ಮುಂದೆ ಯಾವುದೇ ಸಾವು ರಾಜ್ಯದಲ್ಲಿ ಸಂಭವಿಸದಂತೆ ನೋಡಿಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತು ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಈಗಾಗಲೇ 28 ಜನ ಚಾಮರಾಜನಗರದಲ್ಲಿ ಸತ್ತಿದ್ದಾರೆ. 3 ಜನ ಸತ್ತಿದ್ದಾರೆ ಎಂಬ ಸುಧಾಕರ್ ಹೇಳಿಕೆ ಶುದ್ಧ ಸುಳ್ಳು. ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಬಗ್ಗೆ ಹೇಳಿದ್ದಾರೆ. ಇಟ್ಸ್ ಗುಡ್. ಒಳ್ಳೇದೇ ಮಾಡಿದ್ದಾರೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.
Read Moreಅಟಲ್ ಬಿಹಾರ್ ವಾಜಪೇಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಿಎಸ್ ವೈ..!
ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರ್ ವಾಜ್ ಪೇಯಿ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಕಾವೇರಿ ನಿವಾಸದಲ್ಲಿ ವಾಜಪೇಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಕೂಡಾ ಉಪಸ್ಥಿತರಿದ್ದರು. ದೇಶಾದ್ಯಂತ ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ ಹಾಗೂ ಅಜಾತಶತ್ರು ಪ್ರಧಾನಿ ಎಂದೇ ಖ್ಯಾತರಾಗಿದ್ದ ದಿವಂಗತ ಅಟಲ್ ಬಿಹಾರಿ ಅವರ 96ನೇ ಜನ್ಮದಿನ ಆಚರಣೆ ಮಾಡಲಾಗುತ್ತಿದೆ. ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಟಿವಿ ಬೆಂಗಳೂರು
Read Moreಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ..!
ಬೆಂಗಳೂರು: ಬ್ರಿಟನ್ ಸೋಂಕು ಭಾರತದಲ್ಲಿ ಕಾಣಿಸಿಕೊಂಡ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ಹಿನ್ನೆಲೆ ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಇಂದಿನಿಂದ ಜನವರಿ 2 ರವರೆಗೆ ರಾತ್ರಿ 10 ರಿಂದ ಬೆಳಗಿನ ಜಾವ 6 ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ವಿದೇಶದಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸುವಂತೆ ಆದೇಶ ಮಾಡಲಾಗಿದೆ. ಇನ್ನು ತುರ್ತು ಸೇವೆಗಳಿಗೆ ಮಾತ್ರ ನೈಟ್ ಕರ್ಫ್ಯೂ ವೇಳೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈಗಾಗಲೇ ರಾಜ್ಯಾದ್ಯಂತ ಕೆಟ್ಟೆಚ್ಚರ ವಹಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು
Read Moreಸಿದ್ದರಾಮಾಯ್ಯ ವಿರುದ್ದ ಕಿಡಿಕಾರಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ..!
ಬೆಂಗಳೂರು: ನಿಮ್ಮ ಋಣದಲ್ಲಿ ನಾನಿಲ್ಲ, ಆದರೆ ನನ್ನ ಋಣದಲ್ಲಿ ನೀವಿದ್ದೀರಾ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸಿದ್ದರಾಮಾಯ್ಯ ವಿರುದ್ದ ಕಿಡಿಕಾರಿದರು. ನನ್ನ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ನೀಡಿದ ಕುಮಾರಸ್ವಾಮಿ, ನಾನು ಅವರ ಋಣದಲ್ಲಿ ಇಲ್ಲ ಆದರೆ ನನ್ನ ಋಣದಲ್ಲಿ ಸಿದ್ದರಾಮಯ್ಯ ಇದ್ದಾರೆ.ಅವರು ಡಿಸಿಎಂ ಆಗುವಾಗ ನನ್ನ ಕೊಡುಗೆ ಅಪಾರವಾಗಿದೆ. 2004 ರಲ್ಲಿ ಡಿಸಿಎಂ ಆಗುವಲ್ಲಿ ನನ್ನ ಪಾಲಿದೆ,58 ಸ್ಥಾನದಲ್ಲಿ ಗೆಲ್ಲಬೇಕಾದರೆ ನನ್ನ ಪಾಲಿದೆ. ಪ್ರತೀ ದಿನ 700, 800 ಕಿಲೋ ಮೀಟರ್ ಸಂಚರಿಸಿ ಜನರ ಸಂಘಟನೆ ಮಾಡಿದ್ದೇನೆ.ಆರ್ಥಿಕವಾಗಿಯೂ ಸಹಕಾರ ನೀಡಿದ್ದೇನೆ. ಈ ಕಾರಣಕ್ಕಾಗಿ ಸಿದ್ದರಾಮಯ್ಯ ನನ್ನ ಋಣದಲ್ಲಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ವಿಲೀನ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ನಿಲುವನ್ನು ಹಲವಾರು ಬಾರಿ ಮುಕ್ತವಾಗಿ ಹೇಳಿದ್ದೇನೆ. ನಾನು ಬದುಕಿರುವರೆಗೆ ಯಾವುದೇ ಪಕ್ಷದ ಜೊತೆಗೆ…
Read Moreಕೊಂಚ ಮಟ್ಟಿಗೆ ಏರಿಕೆಯಾದ ಅಡುಗೆ ಎಣ್ಣೆ ಬೆಲೆ..!
ಬೆಂಗಳೂರು: ಕೊರೊನಾದಿಂದ ತತ್ತರಿಸಿದ್ದ ಜನತೆಗೆ ಇದೀಗ ಬೆಲೆ ಏರಿಕೆಯೂ ಜೀವನವನ್ನು ಸುಡುವಂತಾಗಿದೆ. ಲಾಕ್ಡೌನ್ ತೆರವಾದ ಬಳಿಕ ಅಡುಗೆ ಎಣ್ಣೆ ಬೆಲೆಯಲ್ಲಿ ಕೊಂಚ ಮಟ್ಟಿಗೆ ಏರಿಕೆ ಕಂಡಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ದೈನಂದಿನ ಬಳಕೆಯ ಅಡುಗೆ ಎಣ್ಣೆ ಬೆಲೆ ಕೂಡ ಸುಮಾರು ಶೇ.35 ರಿಂದ 45 ರಷ್ಟು ಏರಿಕೆಯಾಗಿದೆ. ಲಾಕ್ಡೌನ್ಗೂ ಮುನ್ನ ಕಡಿಮೆ ಇದ್ದ ತೈಲ ಬೆಲೆ ಇದೀಗ ಹೆಚ್ಚಾಗಿದೆ. 100 ರೂಪಾಯಿ ಇದ್ದ ಬೆಲೆ 130 ರಿಂದ 140 ರೂಪಾಯಿಗಳಷ್ಟು ಹೆಚ್ಚಾಗಿದೆ. ಪಾಮ್ ಎಣ್ಣೆ ಬೆಲೆ ಆರು ತಿಂಗಳ ಹಿಂದೆ ಲೀಟರ್ಗೆ 65 ರಿಂದ 75 ರೂಪಾಯಿಯಷ್ಟು ಇತ್ತು. ಆದರೆ ನಂತರ 100 ರೂಪಾಯಿಯಿಂದ 120 ರೂಪಾಯಿಯಷ್ಟಾಗಿದೆ. ಇನ್ನು ಅಡುಗೆ ಎಣ್ಣೆಯಲ್ಲಿ ಏರಿಕೆ ಕಾರಣ ಬೇರೆ ಬೇರೆ ದೇಶಗಳಿಂದ ಪಾಮ್ ಎಣ್ಣೆಯನ್ನು ಆಮದು ಮಾಡಲಾಗುತ್ತಿತ್ತು. ಆದರೆ ಇದೀಗ ಕೊರೊನಾದಿಂದಾಗಿ ಇದಕ್ಕೆ ಅಡ್ಡಿಯಾಗಿದೆ ಆದ್ದರಿಂದ ತೈಲ…
Read Moreಡ್ರಾಪ್ ಕೊಡೊ ನೆಪದಲ್ಲಿ ಯುವತಿಯ ಮೇಲೆರಗಿದ ಆಟೋ ಚಾಲಕ..!
ಬೆಂಗಳೂರು: ಬಸ್ಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಪುಸಲಾಯಿಸಿ ಆಟೋಗೆ ಹತ್ತಿಸಿಕೊಂಡು ಬಳಿಕ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಕಂಪ್ಯೂಟರ್ ಸೈನ್ಸ್ ಅಭ್ಯಾಸ ಮಾಡುತ್ತಿರುವ ಯುವತಿಯೊಬ್ಬಳು, ಇಂದು ಬೆಳಗ್ಗೆ ಆರು ಗಂಟೆ ಸುಮಾರಿಗೆ ಥಣಿ ಸಂದ್ರ ಮುಖ್ಯ ರಸ್ತೆಯಲ್ಲಿ ಬಸ್ಸಿಗಾಗಿ ಕಾಯತ್ತಿದ್ದ ವೇಳೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಆರೋಪಿ ಮುಬಾರಕ್ ಎನ್ನುವ ಆಟೋ ಚಾಲಕ ಆಕೆ ತಲುಪಬೇಕಾದ ಸ್ಥಳಕ್ಕೆ ಕರೆದುಕೊಂಡು ಹೋಗುವಂತೆ ನಟಿಸಿದ್ದಾನೆ ಎನ್ನಲಾಗಿದೆ. ಇದೇ ವೇಳೆ ತಾನು ಹೋಗ ಬೇಕಾದ ಸ್ಥಳವನ್ನು ತಲುಪದೇ ಬೇರೆ ಜಾಗದ ಕಡೆ ಆಟೋ ಚಾಲಕ ಹೋಗುತ್ತಿರುವುದನ್ನು ಯುವತಿ ಗಮನಿಸಿ, ಕಿಚಾಡಲು ಶುರುಮಾಡಿದ್ದಾಳೆ, ಆದರೆ ಆಟೋ ಚಾಲಕ ತನಗೆ ಬೇಕಾಗಿರುವವರು ಹಣ ನೀಡಬೇಕಾಗಿದೆ ಅಲ್ಲಿಗೆ ತೆರಳಿ ಹಣ ಪಡೆದುಕೊಂಡು ನಿಮ್ಮನ್ನು ನಿಮ್ಮ ಜಾಗಕ್ಕೆ ಬಿಡುವೆ ಅಂತ ಹೇಳಿದ್ದಾನಂತೆ. ಆದರೆ ಆ ಕಾಮುಕ ಆಟೋ ಚಾಲಕ ಆ…
Read Moreನಾಯಕತ್ವ ಬದಲಾವಣೆ ವಿಚಾರಕ್ಕೆ ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಆಪ್ತ.!
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಆಪ್ತರಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಸದ್ದಿಲ್ಲದೇ ಬೆಂಗಳೂರಿಗೆ ಭೇಟಿ ನೀಡಿರುವುದು ರಾಜ್ಯ ಬಿಜೆಪಿ ಪಾಳಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಆರ್ ಎಸ್ಎಸ್ ಕಚೇರಿ ಕೇಶವ ಕೃಪಾಕ್ಕೆ ಭೇಟಿ ನೀಡಿದ ಭೂಪೇಂದ್ರ ಯಾದವ್, ಸಂಘದ ನಾಯಕರ ಜೊತೆಗೆ ಸುಧೀರ್ಘ ಸಮಯ ಮಾತುಕತೆ ನಡೆಸಿದ್ದಾರೆ. ರಾಜ್ಯದ ರಾಜಕೀಯದಲ್ಲಿ ಬದಲಾವಣೆ, ವಿದ್ಯಾಮಾನಗಳ ಹಿನ್ನೆಲೆಯಲ್ಲಿ ರಹಸ್ಯ ಭೇಟಿ ಮಾಡಿದ್ದಾರೆಂದು ಹೇಳಲಾಗುತ್ತಿದೆ. ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು
Read Moreಸಾರಿಗೆ ಸಂಸ್ಥೆ ನೌಕರರ ಬೇಡಿಕೆ ಈಡೇರಿಸಲಿ ಎಂದು ಸಿದ್ದರಾಮಯ್ಯ ಒತ್ತಾಯ..!
ಬೆಂಗಳೂರು: ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ಸಂಸ್ಥೆಗಳ ನೌಕರರ ಬೇಡಿಕೆಗಳು ನ್ಯಾಯಯುತವಾಗಿದ್ದರೆ ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.ಸಾರಿಗೆ ಸಂಸ್ಥೆ ನೌಕರರು ಬೀದಿಗಿಳಿದು ಪ್ರತಿಭಟನೆ ಮಾಡ್ತಾ ಇದ್ದು ಸರ್ಕಾರ ಪ್ರತಿಭಟನಾಕಾರರನ್ನು ಕರೆದು ಮಾತನಾಡಲಿ ,ಸರ್ಕಾರ ನಮ್ಮ ಸಲಹೆ ಸೂಚನೆಗಳನ್ನ ಕೇಳಲ್ಲ. ಸರ್ಕಾರ ನಮ್ಮನ್ನ ಅಧಿವೇಶನದಲ್ಲಿಯೂ ಮಾತನಾಡಿಸುತ್ತಿಲ್ಲ. ಸಾರಿಗೆ ಸಂಸ್ಥೆ ನೌಕರರ ಬೇಡಿಕೆಗಳು ನ್ಯಾಯಯುತ ಬೇಡಿಕೆಗಳಾಗಿದ್ರೆ ಸರ್ಕಾರ ಕೂಡಲೇ ಈಡೇರಿಸಬೇಕು ಎಂದಿದ್ದಾರೆ. ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು
Read More