ಕೊರೊನಾ ಸೋಂಕಿತ ಕುಟುಂಬಗಳಿಗೆ ಔಷಧಿ ಕಿಟ್ ಹಸ್ತಾಂತರ..

ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ  ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ ವಿತರಿಸಲು ಪುರಸಭಾ ಸಾಮಾನ್ಯ ನಿಧಿಯಿಂದ ಸುಮಾರು ೩ ಲಕ್ಷ ರೂಪಾಯಿ ವೆಚ್ಚದ ಔಷಧಿ ಕಿಟ್‌ಗಳನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು ರಾಜಕೀಯ ಮಾಡದೆ ಈ ಕೆಲಸ ನಿರ್ವಹಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇನ್ನು ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತನಾಡಿ,ಕೊರೊನಾ ರೋಗವನ್ನು ನಿರ್ಮೂಲ ಮಾಡಲು ಸರ್ಕಾರದ ಜೊತೆ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು. ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಮಾತನಾಡಿ, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಪಂಚ ಸೂತ್ರಗಳನ್ನು ಪಾಲಿಸಿದರೆ ಯಾವುದೇ ರೋಗ ಬಾಧಿಸುವುದಿಲ್ಲ ಆ ನಿಟ್ಟಿನಲ್ಲಿ ಪುರಸಭೆಯ…

Read More

ಕಾಡಿನಿಂದ ನಾಡಿಗೆ ಬಂದ ಆನೆಗಳು..!

ಪಿರಿಯಾಪಟ್ಟಣ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿಗೆಕೋರೆ ಗ್ರಾಮದಿಂದ ಕಾವೇರಿ ನದಿ ದಾಟಿ ಪಿರಿಯಾಪಟ್ಟಣ ತಾಲೂಕಿನ ಚಿಕ್ಕ ಕಮರವಳ್ಳಿ ಗ್ರಾಮಕ್ಕೆ 4 ಆನೆಗಳು ಬಂದಿದ್ದು ಗ್ರಾಮಸ್ಥರು ಜೀವಭಯದಲ್ಲಿ ರಾತ್ರಿ ಸಮಯದಲ್ಲಿ ಕಾಲ ಕಳೆಯ ಬೇಕಾದ ಪರಿಸ್ಥೀತಿ ನಿರ್ಮಾಣವಾಗಿದೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಿರಿಯಾಪಟ್ಟಣದ ತಾಲ್ಲೂಕಿನ ವಲಯ ಅರಣ್ಯಾಧಿಕಾರಿ ರತನ್ ಹಾಗೂ ಅರಣ್ಯ ಸಿಬ್ಬಂದಿಗಳು ಮತ್ತು ಸೋಮವಾರಪೇಟೆ ತಾಲ್ಲೂಕಿನ ಅರಣ್ಯ ಇಲಾಖೆ ಸಿಬ್ಬಂದಿಗಳು, ಬೆಟ್ಟದಪುರ ಠಾಣೆಯ ಪೊಲೀಸರು ಸೇರಿ ಆನೆಗಳನ್ನು ಊರಿನಿಂದ ಓಡಿಸುವ ಪ್ರಯತ್ನ ನಡೆಸುತ್ತಿದ್ದರು. ನಂತರ ವಲಯ ಅರಣ್ಯಾಧಿಕಾರಿ ರತನ್ ಮಾತನಾಡಿ ಜನರು ದೂರ ಇದ್ದು ಆನೆಗಳನ್ನು ಓಡಿಸಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಸ್ಥಳದಲ್ಲಿ ಬೆಟ್ಟದಪುರ ಪೊಲೀಸ್ ಠಾಣೆಯ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಎಎಸ್ ಐ ವಿಜಯ್, ಸೋಮಶೇಖರ್ ಉಪ ವಲಯ ಅರಣ್ಯಾಧಿಕಾರಿ ಮಧುಸೂದನ್,ಮಹೇಶ್, ಪೆಮ್ಮೆಯ ಅರಣ್ಯ ರಕ್ಷಕ ಮಹೇಶ್…

Read More

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನಾಚರಣೆ..!

ನಂಜನಗೂಡು: ತಾಲ್ಲೂಕು ಆಡಳಿತದ ವತಿಯಿಂದ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಪುತ್ತಳಿಗೆ ತಹಸೀಲ್ದಾರ್ ಮಹೇಶ್ ಕುಮಾರ್ ಸೇರಿದಂತೆ ವಿವಿಧ ಗಣ್ಯರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಲಾಯಿತು.ಇದೇ ಸಂದರ್ಭ ಮಾಜಿ ಶಾಸಕ ಕಳೆದೆ ಕೇಶವಮೂರ್ತಿ ನಿಗಮ-ಮಂಡಳಿಗಳ ನೂತನ ಅಧ್ಯಕ್ಷರುಗಳಾದ ಎಸ್ ಮಹದೇವಯ್ಯ ಕೃಷ್ಣಪ್ಪಗೌಡ ನಗರಸಭೆ ಅಧ್ಯಕ್ಷ ಮಹದೇವಸ್ವಾಮಿ ಹಾಗೂ ಮತ್ತಿತರ ಗಣ್ಯರಿಂದಲೂ ಮಾಲಾರ್ಪಣೆ ಮಾಡಲಾಯಿತು. ಬಳಿಕ ಬಾಬಾಸಾಹೇಬರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ತಹಸೀಲ್ದಾರ್ ಮಹೇಶ್ ಕುಮಾರ್ ಹಾಗೂ ಕಾಂಪೋಸ್ಟ್ ನಿಗಮ ಮಂಡಳಿಯ ಅಧ್ಯಕ್ಷರಾದ ಎಸ್ ಮಹದೇವಯ್ಯ ಮಾತನಾಡಿ ಅವರ ವಿಚಾರಧಾರೆಗಳು ಮತ್ತು ಆಶಯದ ಬಗ್ಗೆ ತಿಳಿಸಿ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲ ನಡೆಯಬೇಕು ಎಂದು ತಿಳಿಸಿದರು. ಇನ್ನೂ ವಿವಿಧ ಪರ ದಲಿತ ಸಂಘಟನೆಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಬಾ ಸಾಹೇಬರಿಗೆ ಪುಷ್ಪನಮನ ಸಲ್ಲಿಸಿ ಜಯಕಾರದ…

Read More

ಕುಸಿದ ತಂಬಾಕು ದರ, ಆತಂಕದಲ್ಲಿ ಬೆಳೆಗಾರರು..!

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು ಮಳೆ ಆಶ್ರಿತ ಪ್ರದೇಶವಾಗಿದ್ದು, ಇಲ್ಲಿನ ರೈತರು ಶುಂಠಿ ಮತ್ತು ಜೋಳವನ್ನು ಬೆಳೆಯುತ್ತಾರೆ. ಆದರೆ ಅದಕ್ಕೂ ಸರಿಯಾದ ದರ ಸಿಗದಿರುವುದರಿಂದ ಲಕ್ಷಾಂತರ ರೈತರು ತಂಬಾಕು ಬೆಳೆಯನ್ನು ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ. ರೈತರು ಉತ್ತಮವಾದ ತಂಬಾಕನ್ನು ಬೆಳೆಯುತ್ತಿದ್ದಾರೆ. ಆದರೆ ತಂಬಾಕು ಬೆಳೆಗಾರರಿಗೆ ಸರಿಯಾದ ದರ ಸಿಗದೇ ನಷ್ಟ ಅನುಭವಿಸಿ ಸಂಕಷ್ಟದಲ್ಲಿದ್ದಾರೆ. ತಂಬಾಕು ಬೆಳೆಗಾರರು ಉತ್ಕೃಷ್ಟವಾದ ತಂಬಾಕನ್ನು ಬೆಳೆದರೆ ಅವರಿಗೆ ಉತ್ತಮ ದರ ಸಿಗುತ್ತದೆ ಎಂದು ನೀವು ಭರವಸೆ ನೀಡಿದ್ದೀರಾ, ಆದುದರಿಂದ ಅವರ ತಂಬಾಕನ್ನು ನೀವು ಹೆಚ್ಚು ದರ ನೀಡಿ ಖರೀದಿ ಮಾಡಬೇಕಾಗುತ್ತದೆ ಎಂದು ಪಿರಿಯಾಪಟ್ಟಣ ಶಾಸಕ ಕೆ ಮಹದೇವ್ ಐಟಿಸಿ ಹಾಗೂ ಇತರೆ ಕಂಪೆನಿಯವರಿಗೆ ಒತ್ತಾಯಿಸಿದರು. ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯ ರೈತ ಸಭಾಂಗಣದಲ್ಲಿ ಆಯೋಜಿಸಿದ್ದ ತಂಬಾಕು ಬೆಳೆಗಾರರು ಮತ್ತು ಖರೀದಿದಾರರ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.ತಂಬಾಕು ಮಂಡಳಿಯವರು ರೈತರಿಗೆ ವರ್ಷದಲ್ಲಿ…

Read More

ಮೈಸೂರಿನಲ್ಲಿ ಕೇಕ್ ಮಿಕ್ಸಿಂಗ್ ಮಾಡಿ ಗಮನ ಸೆಳೆದ ಡಿ ಬಾಸ್..!

ಮೈಸೂರು: ಕ್ರಿಸ್ಮ ಸ್ ಹಿನ್ನೆಲೆ ಕೇಕ್ ತಯಾರಿಕೆ ಜೋರಾಗಿ ನಡೆತಿದೆ. ಇದೀಗ ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ನಲ್ಲಿ ನಟ ದರ್ಶನ್ ಕೇಕ್ ಮಿಕ್ಸಿಂಗ್ ಮಾಡಿ ಗಮನ ಸೆಳೆದಿದ್ದಾರೆ. ದಾಸ ಶೆಫ್ ಆಗಿ ಕೇಕ್ ಮಿಕ್ಸ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ದರ್ಶನ್ಗೆದ ನಿರ್ಮಾಪಕ ಸಂದೇಶ್ ಸಾಥ್ ನೀಡಿದ್ದು, ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ನಿರ್ಮಾಪಕ ಸಂದೇಶ್ ನಾಗರಾಜು ಭಾಗಿಯಾಗಿ ಕ್ರಿಸ್ಮನಸ್ ಅಂಗವಾಗಿ ತಯಾರಾಗುತ್ತಿರುವ ಕೇಕ್ ತಯಾರಿಕೆಗೆ ಕೈ ಜೋಡಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತರರೊಂದಿಗೆ ಕ್ರಿಸ್ಮಿಸ್ ಸಂಭ್ರಮದಲ್ಲಿ ತೊಡಗಿ, ಕೇಕ್ ಮಿಕ್ಸಿಂಗ್ ಮಾಡಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸ್ನೇಹಿತರ ಜೊತೆ ಕ್ರಿಸ್ ಮಸ್ ಹಬ್ಬದ ಕೇಕ್ ಮಿಕ್ಸಿಂಗ್ ಮಾಡಿ ಸಂಭ್ರಮಿಸಿದ್ದಾರೆ. ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Read More

ಇಂದಿನ ಮಕ್ಕಳೇ ಮುಂದೆ ದೇಶದ ಸತ್ಪ್ರಜೆಗಳು..!

ಪಿರಿಯಾಪಟ್ಟಣ: ಗ್ರಾಮದ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತುವ ವಿದ್ಯಾರ್ಥಿಗಳ ಜೊತೆ ಅಧಿಕಾರಿಗಳು ಕೈಜೋಡಿಸಿದರೆ ಗ್ರಾಮದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ರಂಗಯ್ಯ ನವರು ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪಂಚಾಯಿತಿ ವತಿಯಿಂದ ಆಯೋಜಿಸಿದ ನಮ್ಮ ಗ್ರಾಮ ನಮ್ಮ ಯೋಜನೆ ಮತ್ತು ಮಕ್ಕಳ ಗ್ರಾಮಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮದಲ್ಲಿರುವ ಸರ್ಕಾರಿ ಶಾಲೆಗಳನ್ನು ಯುವಜನತೆ ಧೂಮಪಾನ ಮದ್ಯಪಾನ ಹಾಗೂ ಇನ್ನಿತರ ಸಮಾಜಘಾತುಕ ಕೆಲಸಗಳಿಗೆ ಬಳಕೆ ಮಾಡಿಕೊಂಡು ಶಾಲೆಯ ವಾತಾವರಣವನ್ನು ಹಾಳು ಮಾಡುತ್ತಿರುವುದು ಕಂಡುಬರುತ್ತಿದೆ ಗ್ರಾಮಸ್ಥರು ಈ ಬಗ್ಗೆ ಪಂಚಾಯಿತಿಗೆ ದೂರು ನೀಡಿದರೆ ಅಂತಹ ವ್ಯಕ್ತಿಗಳನ್ನು ಕಾನೂನು ಅಡಿಯಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೋಮಶೇಖರ್ ಮಾತನಾಡಿ 2021-2022 ನೇ ಸಾಲಿನ ಹಣಕಾಸಿನ ವರ್ಷದಲ್ಲಿ ನರೇಗಾ ಯೋಜನೆಗೆ ಕ್ರಿಯಾ ಯೋಜನೆ ತಯಾರಿಸುತ್ತಿದ್ದು ಸಾರ್ವಜನಿಕರು ಸಮಸ್ಯೆಗಳಾದ…

Read More

ಮತ-ಜಾತಿ, ಪಂಗಡ, ಭಾಷೆ, ಸಂಸ್ಕೃತಿ, ಸೌಹಾರ್ದತೆಯ ನೆಲೆವೀಡು ನಮ್ಮ ಶ್ರೇಷ್ಠ ಭಾರತ- ಕೆಂಪರಾಜು..!

ಪಿರಿಯಾಪಟ್ಟಣ: ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಕೆಂಪರಾಜು ಅವರು ಮಾತನಾಡಿದರು. ಭಾರತ ಜಗತ್ತಿನಲ್ಲೇ ಬೃಹತ್ ಲಿಖಿತ ಸಂವಿಧಾನ ಹೊಂದಿದ್ದು, ತನ್ನದೇ ವೈಶಿಷ್ಟವನ್ನು ಒಳಗೊಂಡಿದೆ. ಕಾನೂನಿನ ಚೌಕಟ್ಟಿನೊಳಗೆ ಎಲ್ಲರೂ ಸಮಾನರು, ದೇಶದ ಪ್ರತಿ ನಾಗರಿಕನೂ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಹೊಂದಿರಬೇಕು ಹಾಗೂ ಸಮರ್ಪಣಾ ಭಾವದಿಂದ ನಾವೆಲ್ಲರೂ ದೇಶಕ್ಕಾಗಿ ಕಾರ್ಯನಿರ್ವಹಿಸಬೇಕು ಎಂದರು. ಇನ್ನೂ ಹೆಚ್ಚುವರಿ ನ್ಯಾಯಾಧೀಶೆ ಬಿ.ಡಿ ರೋಹಿಣಿ ಮಾತನಾಡಿ, ಮಹಿಳೆಯರಿಗೂ ಸಮಾಜದಲ್ಲಿ ಸಮಾನ ಹಕ್ಕುಗಳಿವೆ ಇದನ್ನು ಅರಿತುಕೊಂಡು ಬದುಕು ನಡೆಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಜೆ.ಎಸ್ ನಾಗರಾಜು, ಆರಕ್ಷಕ ಉಪನಿರೀಕ್ಷಕ ಮಹೇಶ್ ಕುಮಾರ್, ವಕೀಲರಾದ ಹರೀಶ್ , ಚಂದ್ರಶೇಖರ್, ಪಿಡಿಒ…

Read More

ಜನರ ಸಹಭಾಗಿತ್ವ ಇದ್ದಾಗ ಮಾತ್ರ ಗ್ರಾಮವನ್ನು ಹೆಚ್ಚೆಚ್ಚು ಅಭಿವೃದ್ಧಿ ಪಡಿಸಲು ಸಾಧ್ಯ- ಪಿಡಿಒ ದಿವಾಕರ್..!

ಪಿರಿಯಾಪಟ್ಟಣ: ಗ್ರಾಮಗಳು ಅಭಿವೃದ್ಧಿಯಾದರೆ ದೇಶವು ಅಭಿವೃದ್ಧಿಯಾದಂತೆ ಆದದರಿಂದ ಗ್ರಾಮದ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರೀಕನ ಸಹಕಾರ ಮುಖ್ಯ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎ ದಿವಾಕರ್ ತಿಳಿಸಿದರು. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಲೆಕ್ಕ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ನರೇಗಾದಡಿ ನಡೆಯುವ ಪ್ರತಿಯೊಂದು ಕಾಮಗಾರಿಯ ಪ್ರಯೋಜನವನ್ನು ಪ್ರತಿ ನಾಗರಿಕನೂ ಪಡೆದುಕೊಂಡಾಗ ಗ್ರಾಮವನ್ನು ಹೆಚ್ಚು ಅಭಿವೃದ್ಧಿ ಪಡಿಸಲು ಸಾಧ್ಯ. ನರೇಗಾದಡಿ ನಡೆಯುವ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಸಂಪೂರ್ಣವಾಗಿ ಮಾಹಿತಿ ನೀಡಿ ಕಾಮಗಾರಿಗಳ ಖರ್ಚು-ವೆಚ್ಚಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು. ಇದರ ಬಗ್ಗೆ ಏನಾದರೂ ಲೋಪದೋಷಗಳಿದ್ದಲ್ಲಿ, ಅದಕ್ಕೆ ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ವೇದಿಕೆ ಇದಾಗಿದೆ. ಆದುದರಿಂದ ಪ್ರತಿಯೊಬ್ಬ ಗ್ರಾಮಸ್ಥರು ಸಾಮಾಜಿಕ ಲೆಕ್ಕ ಪರಿಶೀಲನಾ ಸಭೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕು ಸಂಯೋಜನಾಧಿಕಾರಿ ಯೋಗೇಶ್ ಮಾತನಾಡಿ ನರೇಗಾ ಹಾಗೂ 14ನೇ ಹಣಕಾಸು ಯೋಜನೆಯ ಕಾಮಗಾರಿಯ ಖರ್ಚು-ವೆಚ್ಚಗಳ ಬಗ್ಗೆ ಸಂಪೂರ್ಣ…

Read More

ಜನರ ಸಹಭಾಗಿತ್ವ ಇದ್ದಾಗ ಮಾತ್ರ ಗ್ರಾಮವನ್ನು ಹೇಚ್ಚೆಚ್ಚು ಅಭಿವೃದ್ಧಿ ಪಡಿಸಲು ಸಾಧ್ಯ- ಪಿಡಿಒ ದಿವಾಕರ್..!

ಪಿರಿಯಾಪಟ್ಟಣ: ಗ್ರಾಮಗಳು ಅಭಿವೃದ್ಧಿಯಾದರೆ ದೇಶವು ಅಭಿವೃದ್ಧಿಯಾದಂತೆ ಆದದರಿಂದ ಗ್ರಾಮದ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರೀಕನ ಸಹಕಾರ ಮುಖ್ಯ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎ ದಿವಾಕರ್ ತಿಳಿಸಿದರು.ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಲೆಕ್ಕ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ನರೇಗಾದಡಿ ನಡೆಯುವ ಪ್ರತಿಯೊಂದು ಕಾಮಗಾರಿಯ ಪ್ರಯೋಜನವನ್ನು ಪ್ರತಿ ನಾಗರಿಕನೂ ಪಡೆದುಕೊಂಡಾಗ ಗ್ರಾಮವನ್ನು ಹೆಚ್ಚು ಅಭಿವೃದ್ಧಿ ಪಡಿಸಲು ಸಾಧ್ಯ. ನರೇಗಾದಡಿ ನಡೆಯುವ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಸಂಪೂರ್ಣವಾಗಿ ಮಾಹಿತಿ ನೀಡಿ ಕಾಮಗಾರಿಗಳ ಖರ್ಚು-ವೆಚ್ಚಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು.ಇದರ ಬಗ್ಗೆ ಏನಾದರೂ ಲೋಪದೋಷಗಳಿದ್ದಲ್ಲಿ,ಅದಕ್ಕೆ ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ವೇದಿಕೆ ಇದಾಗಿದೆ.ಆದುದರಿಂದ ಪ್ರತಿಯೊಬ್ಬ ಗ್ರಾಮಸ್ಥರು ಸಾಮಾಜಿಕ ಲೆಕ್ಕ ಪರಿಶೀಲನಾ ಸಭೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.ಪಿರಿಯಾಪಟ್ಟಣ ತಾಲ್ಲೂಕು ಸಂಯೋಜನಾಧಿಕಾರಿ ಯೋಗೇಶ್ ಮಾತನಾಡಿ ನರೇಗಾ ಹಾಗೂ 14ನೇ ಹಣಕಾಸು ಯೋಜನೆಯ ಕಾಮಗಾರಿಯ ಖರ್ಚು-ವೆಚ್ಚಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ…

Read More

ತಾಲ್ಲೂಕು ದಂಡಾಧಿಕಾರಿ-ಪೊಲೀಸ್ ಇಲಾಖೆ ವಿರುದ್ದ ರೈತ ಸಂಘದಿಂದ ಉಗ್ರ ಹೋರಾಟಕ್ಕೆ ಸಿದ್ದತೆ..!

ಪಿರಿಯಾಪಟ್ಟಣ: ಪಿರಿಯಾಪಟ್ಟಣ ತಾಲ್ಲೂಕಿನ ದಂಡಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ನೊಂದ ರೈತ ಕುಟುಂಬಗಳಿಗೆ ನ್ಯಾಯ ಕೊಡಿಸದೇ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘನೆ ಮಾಡುವವರೊಂದಿಗೆ ಉಳ್ಳವರ ಪರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಲೋಕೇಶ್ ರಾಜೇ ಅರಸ್ ಆರೋಪಿಸಿದ್ದಾರೆ. ಪಿರಿಯಾ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ತಾಲ್ಲೂಕಿನ ಕೆ.ಬಸವನಹಳ್ಳಿಯ ರೈತ ನಾರಾಯಣ್ ಹಲವಾರು ವರ್ಷಗಳಿಂದ ನ್ಯಾಯಕ್ಕಾಗಿ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಅಲೆಯುತ್ತಿದ್ದರು ನ್ಯಾಯ ಸಿಕ್ಕಿಲ್ಲ ಹಾಗೂ ಅನೇಕ ರೈತರು ಜಮೀನು ವಿವಾದಗಳಿಂದ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ.ವಿವಾದಗಳಿಗೆ ಸಿಲುಕಿದ ರೈತರು ನ್ಯಾಯಾಲಯದ ಮೊರೆ ಹೋಗಿ, ನ್ಯಾಯಾಲಯದ ತೀರ್ಪು ರೈತರ ಪರ ಬಂದರೂ ತಹಸೀಲ್ದಾರ್ ಶ್ವೇತಾ ರವೀಂದ್ರರವರು ಹಾಗೂ ಪೊಲೀಸ್ ಇಲಾಖೆಯವರು ರಾಜಕೀಯ ಒತ್ತಡಕ್ಕೆ ಒಳಗಾಗಿ ನೊಂದ ರೈತರಿಗೆ ನ್ಯಾಯ ಕೊಡಿಸದೇ ಅಧಿಕಾರಿ ಶಾಹಿಗಳ ಪರ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.…

Read More