ಕೊರೊನಾ ಸೋಂಕಿತ ಕುಟುಂಬಗಳಿಗೆ ಔಷಧಿ ಕಿಟ್ ಹಸ್ತಾಂತರ..

ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ  ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ ವಿತರಿಸಲು ಪುರಸಭಾ ಸಾಮಾನ್ಯ ನಿಧಿಯಿಂದ ಸುಮಾರು ೩ ಲಕ್ಷ ರೂಪಾಯಿ ವೆಚ್ಚದ ಔಷಧಿ ಕಿಟ್‌ಗಳನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು ರಾಜಕೀಯ ಮಾಡದೆ ಈ ಕೆಲಸ ನಿರ್ವಹಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇನ್ನು ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತನಾಡಿ,ಕೊರೊನಾ ರೋಗವನ್ನು ನಿರ್ಮೂಲ ಮಾಡಲು ಸರ್ಕಾರದ ಜೊತೆ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು. ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಮಾತನಾಡಿ, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಪಂಚ ಸೂತ್ರಗಳನ್ನು ಪಾಲಿಸಿದರೆ ಯಾವುದೇ ರೋಗ ಬಾಧಿಸುವುದಿಲ್ಲ ಆ ನಿಟ್ಟಿನಲ್ಲಿ ಪುರಸಭೆಯ…

Read More

“ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಇಲ್ಲೇ ಬಳಕೆಯಾಗ್ಬೇಕು”

ಆಕ್ಸಿಜನ್ ಸರಬರಾಜು ಬಗ್ಗೆ ಸಭೆ ನಡೆಸಿದ್ದೇವೆ. ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು. ಹಲವು ಸೂಚನೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ನಮ್ಮಲ್ಲೇ ಬಳಕೆ ಆಗುವಂತೆ ಆಗಬೇಕು. ಈ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಘೋಯಲ್ ಜೊತೆ ಮಾತುಕತೆ ಮಾಡಿದ್ದೇನೆ ಎಂದಿದ್ದಾರೆ.

Read More

ಕೇಂದ್ರಕ್ಕೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ರಾಜಧಾನಿ ದೆಹಲಿಯಲ್ಲಿ ಆಮ್ಲಜನಕದ ಬಿಕ್ಕಟ್ಟು ಮುಂದುವರೆದಿದೆ. ಕಳೆದ ಹಲವು ದಿನಗಳಿಂದ ದೆಹಲಿ ಹೈಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ಪ್ರತಿ ವಿಚಾರಣೆಯಲ್ಲಿ ಆಮ್ಲಜನಕವನ್ನ ನಿಯಮಿತವಾಗಿ ಪೂರೈಸಲು ನಿರ್ದೇಶನ ನೀಡುತ್ತಿತ್ತು. ಆದ್ರೆ, ಅದು ಕಾರ್ಯರೂಪಕ್ಕೆ ಬಂದಿಲ್ಲ. ಹಾಗಾಗಿ ಇಂದು ಸುಪ್ರೀಂ ಕೋರ್ಟ್ ಸೋಮವಾರದೊಳಗೆ ಆಮ್ಲಜನಕ ಪೂರೈಸುವಂತೆ ತನ್ನ ಆದೇಶದಲ್ಲಿ ಸೂಚಿಸಿದೆ. ದೆಹಲಿಗೆ 700 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿಲ್ಲ ಎಂದು ಕೇಂದ್ರವು ದೆಹಲಿ ಹೈಕೋರ್ಟ್ʼನಲ್ಲಿ ಏಕೆ ಹೇಳಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಆದೇಶವನ್ನ ಪಾಲಿಸುವುದು ಮತ್ತು ವಿಫಲ ಅಧಿಕಾರಿಗಳನ್ನ ಜೈಲಿಗೆ ಹಾಕುವುದು ಕೇಂದ್ರದ ಜವಾಬ್ದಾರಿ ಎಂದು ಹೇಳಿದೆ. ಇದೇ ವೇಳೆ, 10ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಸಲಿದ್ದು, ನಂತರ ರಾಜ್ಯ ಸರ್ಕಾರದ ಸನ್ನದ್ಧತೆಯ ಬಗ್ಗೆ ಪರಿಶೀಲಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

Read More

ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ

ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ ಆಮ್ಲಜನಕ ಕೊರತೆಯಿಂದ ಇನ್ನು ಮುಂದೆ ಯಾವುದೇ ಸಾವು‌ ರಾಜ್ಯದಲ್ಲಿ ಸಂಭವಿಸದಂತೆ ನೋಡಿಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತು ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಈಗಾಗಲೇ 28 ಜನ ಚಾಮರಾಜನಗರದಲ್ಲಿ ಸತ್ತಿದ್ದಾರೆ. 3 ಜನ ಸತ್ತಿದ್ದಾರೆ ಎಂಬ ಸುಧಾಕರ್ ಹೇಳಿಕೆ ಶುದ್ಧ ಸುಳ್ಳು. ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಬಗ್ಗೆ ಹೇಳಿದ್ದಾರೆ. ಇಟ್ಸ್ ಗುಡ್.‌ ಒಳ್ಳೇದೇ ಮಾಡಿದ್ದಾರೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.

Read More

ಅಟಲ್ ಬಿಹಾರ್ ವಾಜಪೇಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಿಎಸ್ ವೈ..!

ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರ್ ವಾಜ್ ಪೇಯಿ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಕಾವೇರಿ ನಿವಾಸದಲ್ಲಿ ವಾಜಪೇಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಕೂಡಾ ಉಪಸ್ಥಿತರಿದ್ದರು. ದೇಶಾದ್ಯಂತ ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ ಹಾಗೂ ಅಜಾತಶತ್ರು ಪ್ರಧಾನಿ ಎಂದೇ ಖ್ಯಾತರಾಗಿದ್ದ ದಿವಂಗತ ಅಟಲ್ ಬಿಹಾರಿ ಅವರ 96ನೇ ಜನ್ಮದಿನ ಆಚರಣೆ ಮಾಡಲಾಗುತ್ತಿದೆ. ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಟಿವಿ ಬೆಂಗಳೂರು

Read More

2ನೇ ಹಂತದ ಗ್ರಾ.ಪಂ.ಚುನಾವಣೆ- ಮತದಾರರಿಗೆ ಅಕ್ರಮ ಮದ್ಯ-ಮಾಂಸ ವಿತರಣೆ..!

ಲಿಂಗಸುಗೂರು:ಎರಡನೇ ಹಂತದ ಗ್ರಾ.ಪಂ.ಚುನಾವಣೆಯ ಮತದಾನದ ದಿನ ಸಮೀಪಿಸುತ್ತಿದ್ದಂತೆಯೇ ಆಕಾಂಕ್ಷಿಗಳು ಮತದಾರರಿಗೆ ಆಮಿಷಗಳನ್ನು ನೀಡುವುದು ಹೆಚ್ಚಾಗುತ್ತಿದೆ. ಪ್ರತಿ ಮನೆಗೂ ಚಿಕನ್, ಮಟನ್, ಮಧ್ಯ ಸರಬರಾಜು ಮಾಡಲಾಗುತ್ತಿದೆ.ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನಲ್ಲಿ ರಾಜಾರೋಷವಾಗಿ ಹಾಡು ಹಗಲೇ ಮಾಂಸದ ಪೊಟ್ಟಣಗಳನ್ನು ಕೊಂಡೊಯ್ಯುತ್ತಿದ್ದರೂ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಕ್ಯಾರೇ ಎನ್ನದೇ ಕಣ್ಮುಚ್ಚಿ ಕುಳಿತಿರುವುದು ಮಾತ್ರ ಸಾರ್ವಜನಿಕರ ಅಸಮಧಾನಕ್ಕೆ ಕಾರಣವಾಗಿದೆ. ತಾಲೂಕಿನ ಗೋನಾವಾಟ್ಲಾ, ಗುಂತಗೋಳ, ಕಾಳಾಪೂರು, ಗೊರೆಬಾಳ, ಮಾವಿನಭಾವಿ, ಆನೆಹೊಸೂರು, ಈಚನಾಳ, ರೋಡಲಬಂಡಾ (ಯುಕೆಪಿ) ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಸ್ಪರ್ಧಿಗಳು ಮತದಾರರನ್ನು ಸೆಳೆಯಲು ಹಲವು ತಂತ್ರಗಳನ್ನು ಬಳುಸುತ್ತಿದ್ದಾರೆ. ಒಂದು ಕುಟುಂಬದಲ್ಲಿ 2 ಮತಗಳಿದ್ದರೆ, ಒಂದು ಕೆಜಿ ಚಿಕ್ಕನ್ ಒಂದು ಕ್ವಾಟರ್ ಮಧ್ಯ ಹಾಗೂ 3 ಮತದಾರರು ಇದ್ದರೆ 2 ಕೆಜಿ ಚಿಕ್ಕನ್ 2 ಕ್ವಾಟರ್ ಎಣ್ಣೆ ಹಂಚುತ್ತಿದ್ದಾರೆ ಎಂದು ಮೂಲಗಕಲಿಂದ ತಿಳಿದು ಬಂದಿದೆ. ಪ್ರತಿಯೊಂದು ಗ್ರಾಮಗಳಲ್ಲಿನ ಹೋಟೆಲ್, ಪಾನ್ಶಾಪ್, ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮಧ್ಯ…

Read More

ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ..!

ಬೆಂಗಳೂರು: ಬ್ರಿಟನ್ ಸೋಂಕು ಭಾರತದಲ್ಲಿ ಕಾಣಿಸಿಕೊಂಡ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ಹಿನ್ನೆಲೆ ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಇಂದಿನಿಂದ ಜನವರಿ 2 ರವರೆಗೆ ರಾತ್ರಿ 10 ರಿಂದ ಬೆಳಗಿನ ಜಾವ 6 ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ವಿದೇಶದಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸುವಂತೆ ಆದೇಶ ಮಾಡಲಾಗಿದೆ. ಇನ್ನು ತುರ್ತು ಸೇವೆಗಳಿಗೆ ಮಾತ್ರ ನೈಟ್ ಕರ್ಫ್ಯೂ ವೇಳೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈಗಾಗಲೇ ರಾಜ್ಯಾದ್ಯಂತ ಕೆಟ್ಟೆಚ್ಚರ ವಹಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Read More

ಜೆಡಿಎಸ್ ಒಳ ಒಪ್ಪಂದ ಬಗ್ಗೆ ಮಾಜಿ ಸಚಿವ ಪಿಎಂಎನ್ ಭವಿಷ್ಯ..!

ಮಳವಳ್ಳಿ: ಅಧಿಕಾರದಿಂದ ಕೆಳಗೆ ಇಳಿಸಿದವರ ಜೊತೆ ಒಳ ಒಪ್ಪಂದ ಮಾಡಿಕೊಳ್ಳಲು ಜೆಡಿಎಸ್ ಪಕ್ಷ ಹೊರಟಿದೆ ಎಂದು ಮಾಜಿ ಸಚಿವ ಪಿ ಎಂ ನರೇಂದ್ರಸ್ವಾಮಿ ಆರೋಪಿಸಿದ್ದಾರೆ.ಮಳವಳ್ಳಿ ತಾಲ್ಲೂಕಿನ ಪೂರಿಗಾಲಿ ಗ್ರಾಮದಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,2006 ರಿಂದ 2008 ಯಾವ ಒಳ ಒಪ್ಪಂದ ಮಾಡಿಕೊಂಡಿದ್ದರು ಆಗ ಯಡಿಯೂರಪ್ಪರನ್ನು ಮರೆತಿದ್ದರು.ಇದಲ್ಲದೆ ಎರಡನೇಯ ಬಾರಿ 2018 ಒಳ ಒಪ್ಪಂದ ಮಾಡಿಕೊಂಡಿದ್ದರು, ಆಗಲೂ ಸಹ ಯಡಿಯೂರಪ್ಪ ರವರನ್ನು ಕುಮಾರಸ್ವಾಮಿ ಮರೆತರು.ಈಗ ಪುನಃ ಒಳ ಒಪ್ಪಂದ ಮಾಡಲು ಹೊರಡಿದ್ದಾರೆ ಮತ್ತೆ ಮರುಕಳುಹಿಸುತ್ತದೆ ಎಂದು ಭವಿಷ್ಯ ನುಡಿದರು.ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಬಗ್ಗೆ ನಾನು ಮಾತನಾಡುವುದಿಲ್ಲ, ನಮ್ಮ ನಾಯಕರು ಈಗಾಗಲೇ ಮಾತನಾಡಿದ್ದಾರೆ. ನಮ್ಮಕ್ಷೇತ್ರದಲ್ಲಿ ಎಷ್ಟರ ಮಟ್ಟಿಗೆ ಹೊಂದಾಣಿಕೆ ಮಾಡಿಕೊಂಡಿದ್ದು ಎಲ್ಲರಿಗೂ ಗೊತ್ತು ಎಂದರು. ವರದಿ- ಎ.ಎನ್ ಲೋಕೇಶ್ ಎಕ್ಸ್ಪ್ರೆಸ್ ಟಿವಿ ಮಳವಳ್ಳಿ

Read More

ಸಿದ್ದರಾಮಾಯ್ಯ ವಿರುದ್ದ ಕಿಡಿಕಾರಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ..!

ಬೆಂಗಳೂರು: ನಿಮ್ಮ ಋಣದಲ್ಲಿ ನಾನಿಲ್ಲ, ಆದರೆ ನನ್ನ ಋಣದಲ್ಲಿ ನೀವಿದ್ದೀರಾ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸಿದ್ದರಾಮಾಯ್ಯ ವಿರುದ್ದ ಕಿಡಿಕಾರಿದರು. ನನ್ನ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ನೀಡಿದ ಕುಮಾರಸ್ವಾಮಿ, ನಾನು ಅವರ ಋಣದಲ್ಲಿ ಇಲ್ಲ ಆದರೆ ನನ್ನ ಋಣದಲ್ಲಿ ಸಿದ್ದರಾಮಯ್ಯ ಇದ್ದಾರೆ.ಅವರು ಡಿಸಿಎಂ ಆಗುವಾಗ ನನ್ನ ಕೊಡುಗೆ ಅಪಾರವಾಗಿದೆ. 2004 ರಲ್ಲಿ ಡಿಸಿಎಂ ಆಗುವಲ್ಲಿ ನನ್ನ ಪಾಲಿದೆ,58 ಸ್ಥಾನದಲ್ಲಿ ಗೆಲ್ಲಬೇಕಾದರೆ ನನ್ನ ಪಾಲಿದೆ. ಪ್ರತೀ ದಿನ 700, 800 ಕಿಲೋ ಮೀಟರ್ ಸಂಚರಿಸಿ ಜನರ ಸಂಘಟನೆ ಮಾಡಿದ್ದೇನೆ.ಆರ್ಥಿಕವಾಗಿಯೂ ಸಹಕಾರ ನೀಡಿದ್ದೇನೆ. ಈ ಕಾರಣಕ್ಕಾಗಿ ಸಿದ್ದರಾಮಯ್ಯ ನನ್ನ ಋಣದಲ್ಲಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ವಿಲೀನ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ನಿಲುವನ್ನು ಹಲವಾರು ಬಾರಿ ಮುಕ್ತವಾಗಿ ಹೇಳಿದ್ದೇನೆ. ನಾನು ಬದುಕಿರುವರೆಗೆ ಯಾವುದೇ ಪಕ್ಷದ ಜೊತೆಗೆ…

Read More

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷನ ಗೂಂಡಾಗಿರಿ- ಬೆದರಿಕೆಯ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್..!

ಮಾಲೂರು: ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾದನಹಟ್ಟಿ ಗೇಟ್ ಬಳಿಯಹಿರುವ ಅಲ್ ಕಾರ್ಗೋ ಖಾಸಗಿ ಕಂಪನಿ ಕಾರ್ಮಿಕರಿಗೆ ಊಟ ಸರಬರಾಜು ಮಾಡಲು ಗುತ್ತಿಗೆ ಪಡೆದಿರುವ ಮಾಲೀಕರಿಗೆ ಊಟಕ್ಕೆ ವಿಷ ಹಾಕೋದಾಗಿ ಕೋಲಾರ ಜಿಲ್ಲಾ ಪಂಚಾಯತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿ ಗೌಡ ಬೆದರಿಕೆ ಹಾಕಿದ್ದಾರೆ. ಗುತ್ತಿಗೆ ಪಡೆದ ಮಾಲೀಕರಿಗೆ ಪೋನ್ ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಊಟ ಸರಬರಾಜು ಮಾಡುವ ವಾಹನಕ್ಕೆ ಬೆಂಕಿ ಹಚ್ಚೋದಾಗಿ ಬೆದರಿಕೆ ಹಾಕಿದ್ದಾರೆ. ಇನ್ನು ಅಧ್ಯಕ್ಷನ ಬೆದರಿಕೆಯ ಆಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ವರದಿ-ಮಾರುತೇಶ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ಮಾಲೂರು

Read More